ಮಡಿಕೇರಿ: ಇಲ್ಲಿನ ಲಿಟ್ಲ್ ಫ್ಲವರ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಉದ್ಘಾಟಿಸಿದರು. ಸಂಸ್ಥೆಯ ಮುಖ್ಯಸ್ಥೆ ಪರ್ಲಕೋಟಿ ಸುನಿತಾ ಪ್ರೀತು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅತಿಥಿಗಳಾಗಿ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಬಿ.ಇ.ಓ. ಗಾಯತ್ರಿ, ಡಾ. ಕೋರನ ಸರಸ್ವತಿ, ಸಿ.ಕೆ. ವೇಣುಗೋಪಾಲ್, ಪ್ರೀತು, ಪ್ರಾಂಶುಪಾಲ ಬೆಳ್ಯಪ್ಪ, ತಾಲೂಕು ಕಸಾಪ ಅಧ್ಯಕ್ಷ ಕುಡೆಕಲ್ ಸಂತೋಷ್ ಉಪಸ್ಥಿತರಿದ್ದು, ಮಾತನಾಡಿದರು. ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.