ಮಡಿಕೇರಿ, ಜ. 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ 119ನೇ ಜನ್ಮ ದಿನಾಚರಣೆ ತಾ. 28 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 10 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಬಳಿಕ ಮೆರವಣಿಗೆ ಹೊರಡಲಿದೆ.