ಕುಶಾಲನಗರ, ಜ. 27: ಸಮಾಜದಲ್ಲಿ ಪರಸ್ಪರ ಬಾಂಧವ್ಯ ವೃದ್ಧಿಸುವದರೊಂದಿಗೆ ಸೌಹಾರ್ದ ಸಂದೇಶ ಸಾರುವ ನಿಟ್ಟಿನಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆ ವತಿಯಿಂದ ತಾ. 30 ರಂದು ಕುಶಾಲನಗರದಲ್ಲಿ ಮಾನವ ಸರಪಳಿ ರಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ತಾಲೂಕು ಸಂಚಾಲಕ ವಿ.ಪಿ.ಶಶಿಧರ್ ತಿಳಿಸಿದರು.
ಕುಶಾಲನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರಗಳನ್ನು ಒಳಗೊಂಡಂತೆ ಪ್ರಮುಖ ನಗರಗಳಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಕುಶಾಲನಗರ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಸಂಜೆ 3 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭ ಕಾರ್ಯಕ್ರಮಕ್ಕೆ ಸಂಬಂಧಿಸಿದ ಕರಪತ್ರ ಬಿಡುಗಡೆಗೊಳಿಸಲಾಯಿತು.
ಗೋಷ್ಠಿಯಲ್ಲಿ ತಾಲೂಕು ಸಂಚಾಲಕ ಪಿ.ಆರ್. ಭರತ್, ಪ್ರಮುಖರಾದ ವಿ.ಎಸ್. ಆನಂದಕುಮಾರ್, ಕೆ.ಬಿ. ರಾಜು, ಎಂ.ಕೆ. ಹಮೀದ್, ಕೆ.ಎಸ್. ಮಹೇಶ್ ಇದ್ದರು.