ಕುಶಾಲನಗರ, ಜ. 27: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಕುಶಾಲನಗರದಲ್ಲಿ ತಾ. 29 ರಿಂದ ಹಮ್ಮಿಕೊಂಡಿರುವ ಸಿರಿಧಾನ್ಯಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು.
ಕುಶಾಲನಗರ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಎಂ.ಎಂ. ಚರಣ್ ರಥಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ವಿವಿಧ ರೀತಿಯ ಖಾಯಿಲೆಗಳಿಗೆ ಸಿರಿಧಾನ್ಯಗಳು ಔಷಧಿ ರೂಪದಲ್ಲಿ ಕಾರ್ಯನಿರ್ವಹಿಸುತ್ತದೆ.
ತಾ. 29 ಹಾಗೂ 30 ರಂದು ಪಟ್ಟಣದ ಎಪಿಸಿಎಂಎಸ್ ಸಭಾಂಗಣ ದಲ್ಲಿ ನಡೆಯಲಿರುವ ಮೇಳದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.
ಯೋಜನೆಯ ಸೋಮವಾರ ಪೇಟೆ ವಲಯ ಯೋಜನಾಧಿಕಾರಿ ವೈ. ಪ್ರಕಾಶ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್. ಚಂದ್ರಮೋಹನ್, ಕುಶಾಲನಗರ ವಲಯ ಮೇಲ್ವಿಚಾರಕ ಕೆ.ಹರೀಶ್, ಸಿರಿ ಗ್ರಾಮೋದ್ಯೋಗ ಮೇಲ್ವಿಚಾರಕ ಹರೀಶ್ ಕುಮಾರ್, ಸೇವಾ ಪ್ರತಿನಿಧಿಗಳಾದ ಡಾಟಿ, ಯಶೋಧ, ಚಂದ್ರಾವತಿ, ಜಯಲಕ್ಷ್ಮಿ, ಸದಸ್ಯರುಗಳಾದ ಪ್ರಿಯಾ, ಸಿಂಧು, ಯಾಸ್ಮಿನ್, ಅರ್ಪಿತಾ, ಐಶ್ವರ್ಯ ಇದ್ದರು.