ವೀರಾಜಪೇಟೆ: ವೀರಾಜಪೇಟೆ ಕಾವೇರಿ ಪದವಿ ಕಾಲೇಜು ವತಿಯಿಂದ ಕಾವೇರಿ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವದ ಪ್ರಯುಕ್ತವಾಗಿ ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಸಿಬ್ಬಂದಿಗೆ ಥ್ರೋಬಾಲ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾವೇರಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸಿ.ಡಿ. ಮಾದಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ರಾಪ್ಟ್ರೀಯ ಹಾಕಿ ಆಟಗಾರ ಲಯನ್ ಕೋದಂಡ ಸೋಮಣ್ಣ ಹಾಜರಿದ್ದರು. ಕಾರ್ಯಕ್ರಮದಲ್ಲಿ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಸಿ.ಎಂ. ನಾಚಪ್ಪ ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ ಉಪಸ್ಥಿತರಿದ್ದರು. ಪಂದ್ಯಾವಳಿಯಲ್ಲಿ ಗೋಣಿಕೊಪ್ಪದ ಕಾವೇರಿ ಪದವಿ ಹಾಗೂ ಪದವಿಪೂರ್ವ ಕಾಲೇಜು, ಕಾವೇರಿ ಪಾಲಿಟೆಕ್‍ನಿಕ್ ಕಾಲೇಜು ಹಾಗೂ ವೀರಾಜಪೇಟೆ ಕಾವೇರಿ ಪದವಿ ಹಾಗೂ ಪದವಿಪೂರ್ವ ಕಾಲೇಜು ತಂಡಗಳು ಭಾಗವಹಿಸಿದ್ದವು. ಥ್ರೋಬಾಲ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಗೋಣಿಕೊಪ್ಪದ ಕಾವೇರಿ ಪದವಿ ಹಾಗೂ ಪದವಿಪೂರ್ವ ಕಾಲೇಜು ತಂಡವು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದುಕೊಂಡಿತು. ಕ್ರೀಡಾಕೂಟವನ್ನು ವೀರಾಜಪೇಟೆ ಕಾವೇರಿ ಪದವಿ ಹಾಗೂ ಪದವಿಪೂರ್ವ ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ. ಎಂ.ಎಂ. ದೇಚಮ್ಮ ಹಾಗೂ ಎಂ.ಎ. ನಾಚಪ್ಪ ಸಂಘಟಿಸಿದ್ದರು.