ಮಡಿಕೇರಿ, ಜ. 28: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್ ಅಹ್ಮದ್, ಆಯೋಗದ ಕಾರ್ಯದರ್ಶಿಗಳು, ಸದಸ್ಯರು ಮತ್ತು ವಿಶೇಷ ಆಹ್ವಾನಿತರ ತಂಡ ಫೆ. 2 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದೆ.

ಫೆ. 2 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸ್ವಯಂ ಸಂಸ್ಥೆಗಳ ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಲಿದೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಪ್ರಧಾನ ಮಂತ್ರಿಯವರ ಹೊಸ 15 ಅಂಶಗಳ ಕಾರ್ಯಕ್ರಮ ಹಾಗೂ ಅಲ್ಪಸಂಖ್ಯಾತರ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಯಲಿದೆ.

ಸಂಜೆ 4.15 ಗಂಟೆಗೆ ಪತ್ರಿಕಾಗೋಷ್ಠಿ ನಡೆಯಲಿದೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಎಸ್. ಅನೀಸ್ ಸಿರಾಜ್ ತಿಳಿಸಿದ್ದಾರೆ.