* ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಪ್ಯಾನಲ್ ವಕೀಲರಿಗೆ ತರಬೇತಿ ಕಾರ್ಯಕ್ರಮ ತಾ. 29 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ. ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ಮಾಸ್ಟರ್ ಆರ್‍ಕೆಜಿ ಎಂ.ಎಂ. ಮಹಾಸ್ವಾಮೀಜಿ, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ. ಪವನೇಶ್, ಜಿ.ಕಾ.ಸೇ.ಪ್ರಾ. ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಯಾದ ವಿಜಯ ಕುಮಾರ್, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ. ಕೆ. ಶರ್ಮಿಳಾ ಕಾಮತ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ತರಬೇತುದಾರರಾದ ರಮಾದೇವಿ ಇತರರು ಭಾಗವಹಿಸಲ್ಲಿದ್ದಾರೆ.

* ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ವತಿಯಿಂದ ತಾ. 29 ರಂದು (ಇಂದು) ಬೆಳಿಗ್ಗೆ 9.30 ಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮ ಜಯಂತಿ ಕಾರ್ಯಕ್ರಮವನ್ನು ರೋಷಾನರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಕೆ. ಸುಬ್ಬಯ್ಯ ತಿಳಿಸಿದ್ದಾರೆ.