ಸುಂಟಿಕೊಪ್ಪ, ಜ. 28: ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸರಕಾರ ಕಲಿಕೆಗೆ, ಮುಂದಿನ ಭವಿಷ್ಯ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸೌಲಭ್ಯ ಕಲ್ಪಿಸಿಕೊಡುತ್ತಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ಸದೃಢ ಸಮಾಜ ಕಟ್ಟಲು ಮುಂದಾಗಬೇಕು ಎಂದು ಹಿರಿಯ ರಾಜಕಾರಣಿ ಯಂಕನ ಕರುಂಬಯ್ಯ ಕರೆ ನೀಡಿದರು.

ಇಲ್ಲಿನ ಗದ್ದೆಹಳ್ಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಅವರು ಮಕ್ಕಳಲ್ಲಿ ದೇಶಾಭಿಮಾನ ಮೂಡಿಸಲು ಪೋಷಕರು ಶಿಕ್ಷಕರು ಶ್ರಮಿಸಬೇಕು ಎಂದರು.

ತಾ.ಪಂ. ಸದಸ್ಯೆ ವಿಮಲಾವತಿ ಮಾತನಾಡಿ, ಭಾರತದ ಸಂವಿಧಾನವನ್ನು ರಚಿಸಿದ ಡಾ. ಅಂಬೇಡ್ಕರ್ ಅವರ ಮುಂದಾ ಲೋಚನೆಯಿಂದ ದೇಶ ಸುಭೀಕ್ಷೆ ಯಲ್ಲಿದೆ ಎಂದರು. ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಗ್ರಾ.ಪಂ. ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಸ್‍ಡಿಎಂಸಿ ಅಧ್ಯಕ್ಷೆ ರೇಷ್ಮಾ ಮಾತನಾಡಿ, ಈ ಶಾಲೆ ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರು ಶಕ್ತಿಮೀರಿ ಶ್ರಮಿಸುತ್ತಿದ್ದಾರೆ ಎಂದರು.

ಗ್ರಾ.ಪಂ. ಸದಸ್ಯ ಕೆ.ಇ.ಕರೀಂ ಸ್ವಾಗತಿಸಿ, ಪ್ರಾಸ್ತಾವಿಕ ನುಡಿ ಯಾಡಿದರು. ವೇದಿಕೆಯಲ್ಲಿ ಗ್ರಾ.ಪಂ. ಸದಸ್ಯರುಗಳಾದ ಗಿರಿಜಾ ಉದಯಕುಮಾರ್, ನಾಗರತ್ನ ಸುರೇಶ್, ಮಾಜಿ ಗ್ರಾ.ಪಂ. ಉಪಾಧ್ಯಕ್ಷೆ ನಳಿನಿ ಲೋಕೇಶ್, ಶಾಲಾ ಮುಖ್ಯೋಪಾಧ್ಯಾಯಿನಿ ಮೀನಾಕ್ಷಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳು, ಸಾರ್ವಜನಿಕರು, ಶಿಕ್ಷಕಿಯರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಶಾಲಾ ಮಕ್ಕಳು ಪ್ರಾರ್ಥಿಸಿ, ಶಾಲಾ ಮುಖ್ಯೋಪಾ ಧ್ಯಾಯಿನಿ ಮೀನಾಕ್ಷಿ ಸ್ವಾಗತಿಸಿ, ಶಿಕ್ಷಕಿ ಶೈಲಾಜ ನಿರೂಪಿಸಿ, ಹಿರಿಯ ಶಿಕ್ಷಕಿ ಪುಷ್ಪಾವತಿ ವಂದಿಸಿದರು.