ಮಡಿಕೇರಿ, ಜ. 28: ಭಾರತ ಸರ್ಕಾರ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಾಹಿತಿ ಮತ್ತು ಪ್ರಸರಣ ಮಂತ್ರಾಲಯ, ಸಂಗೀತ ಮತ್ತು ನಾಟಕ ವಿಭಾಗ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಸ್ವಚ್ಛ ಭಾರತದಡಿಯಲ್ಲಿ ಸ್ವಚ್ಛತೆಯೇ ಸೇವೆ” ಎಂಬ ಜಾಗೃತಿ ಕಾರ್ಯಕ್ರಮಗಳನ್ನು ಬೀದಿ ನಾಟಕದ ಮೂಲಕ ಪ್ರದರ್ಶಿಸಲಾಯಿತು.

ದಿವ್ಯ ಜ್ಯೋತಿ ಯುವತಿ ಮಂಡಳಿ ಬೋಯಿಕೇರಿ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿ, ಸರಕಾರಿ ಸಂಯುಕ್ತ ಪ್ರೌಢಶಾಲೆ, ಕಡಗದಾಳು, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಡಿಕೇರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಕೇರಿ ಕಗ್ಗೋಡ್ಲು, ನೇತಾಜಿ ಯುವಕ ಸಂಘ, ತಾಳತ್ತಮನೆ ಮುಂತಾದೆಡೆಗಳಲ್ಲಿ ಸ್ವಚ್ಛ ಭಾರತ್, ಪ್ರಧಾನ ಮಂತ್ರಿ ಜನ್-ಧನ್ ಯೋಜನೆ, ಹದಿಹರೆಯದ ಸಮಸ್ಯೆ ಮತ್ತು ಆರೋಗ್ಯ ಹಾಗೂ ಬಾಲ್ಯ ವಿವಾಹದ ಬಗ್ಗೆ ಕಾರ್ಯಕ್ರಮ ನಡೆಸಲಾಯಿತು.

ಮುಖ್ಯ ಅತಿಥಿಗಳಾಗಿ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ, ಪಿ.ಡಿ.ಓ. ಮೇಕೇರಿ ಗ್ರಾಮ ಪಂಚಾಯಿತಿ ಪಿ.ಡಿ.ಓ. ಶ್ರೇಯಸ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಇತರರು ಪಾಲ್ಗೊಂಡಿದ್ದರು.