ಮಡಿಕೇರಿ, ಜ.29 : ವೀರಾಜಪೇಟೆ ತಾಲೂಕು ವ್ಯಾಪ್ತಿಯ ಗೋಣಿಕೊಪ್ಪ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯನ್ನು ಕೊಡಗು ಮತ್ತು ಚಾಮರಾಜನಗರ ವೃತ್ತದ ಸೆಸ್ಕ್ ಅಧೀಕ್ಷಕ ಎಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ತಾ. 31 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಗೋಣಿಕೊಪ್ಪಲು ಉಪವಿಭಾಗ ಕಚೇರಿ ಆವರಣದಲ್ಲಿ ನಡೆಸಲಾಗುವದು ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ. ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಸಭೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳುವಂತೆ ಅವರು ಕೋರಿದ್ದಾರೆ.