ಮಡಿಕೇರಿ,ಜ. 29: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ 119ನೇ ಜನ್ಮದಿನಾಚರಣೆಯೊಂದಿಗೆ ನಿನ್ನೆ ವಿವಿಧೆಡೆಗಳಲ್ಲಿ ವೀರ ಸೇನಾನಿಗೆ ಗೌರವ ನಮನ ಸಲ್ಲಿಸಲಾಯಿತು. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ, ಸೋಮವಾರಪೇಟೆ, ಗೋಣಿಕೊಪ್ಪಲು ಮುಂತಾದೆಡೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಕಾರ್ಯಪ್ಪ ಕಾಲೇಜು

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ, ಭಾರತದ ಮೊದಲ ಕಮಾಂಡರ್ ಇನ್ ಚೀಫ್, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಅವರ 119 ನೇ ಜನುಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಎನ್‍ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್ ವಿ.ಎಂ. ನಾಯ್ಕ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಪಾರ್ವತಿ ಅಪ್ಪಯ್ಯ ಮಾತನಾಡಿದರು. ವೇದಿಕೆಯಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ಎನ್ ಸಿ ಸಿ ಅಧಿಕಾರಿ ಮೇಜರ್ ರಾಘವ ಬಿ, ಹಿಂದಿ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಹೆಗಡೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ನಿರ್ವಹಣೆ ವಿಭಾಗದ ಮುಖ್ಯಸ್ಥ ಡಾ.ಜಗದೀಶ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ರವಿಶಂಕರ್, ವಾಣಿಜ್ಯ ಆಡಳಿಡ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಡಾ ಗಾಯತ್ರಿ, ಇಂಗ್ಲೀಷ್ ಉಪನ್ಯಾಸಕ ಶ್ರೀನಿವಾಸ್, ಪತ್ರಿಕೋದ್ಯಮ ಉಪನ್ಯಾಸಕ ಇಳಯರಾಜ ಕೆ ಎಸ್, ವಿದ್ಯಾರ್ಥಿ ನಾಯಕರು, ಎನ್‍ಸಿಸಿ ಕೆಡೆಟ್ ಗಳು ಭಾಗವಹಿಸಿದ್ದರು.

ಸೋಮವಾರಪೇಟೆ: ಭಾರತೀಯ ಸೇನಾ ಪಡೆಗಳಲ್ಲಿ ಪ್ರಥಮ ಮಹಾದಂಡನಾಯಕರಾಗಿ ಸೇವೆ ಸಲ್ಲಿಸಿ, ವಿಶ್ವದ ಗಮನ ಸೆಳೆದಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರು ಇಂದಿಗೂ ಜನಮಾನಸದಲ್ಲಿ ಉಳಿದಿದೆ ಎಂದು ಜೈಜವಾನ್ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಬಣ್ಣಿಸಿದರು. ಪಟ್ಟಣದ ಜೈ ಜವಾನ್ ಮಾಜಿ ಸೈನಿಕರ ಸಂಘದಲ್ಲಿ ಆಯೋಜಿಸಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಬಸಪ್ಪ, ಖಜಾಂಚಿ ಸುಕುಮಾರ್, ಆಂತರಿಕ ಲೆಕ್ಕ ಪರಿಶೋಧಕರಾದ ಮಾಚಯ್ಯ, ಅಭಿಯಂತರರಾದ ಭಾಮಿನಿ ಸೇರಿದಂತೆ ಇನ್ನಿತರರು ಹಾಜರಿದ್ದರು.