ಮಡಿಕೇರಿ, ಜ. 30: ತಾ. 31ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಎ.ವಿ. ಶಾಲೆ ಬಳಿಯಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ದಿನ ನಿತ್ಯ ಬಳಕೆಯ ಪದಾರ್ಥಗಳಾದ ಗ್ಯಾಸ್ ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಆಹಾರ ಉತ್ಪನ್ನಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆ ಮಾಡುವದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್, ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಗರ ಸಮಿತಿ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್ ತಿಳಿಸಿದ್ದಾರೆ.