ಮಡಿಕೇರಿ, ಜ. 31: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥಾನ ಮೈಸೂರು ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ. 16 ರಿಂದ 21 ರವರೆಗೆ ಅಭಿಜಾತ ಕನ್ನಡ ಪಠ್ಯವಾಚನ ಅಧ್ಯಯನ ಶಿಬಿರವನ್ನು ಚಿಕ್ಕ ಅಳುವಾರ ಜ್ಞಾನ ಕಾವೇರಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ತಿಳಿಸಿದ್ದಾರೆ.
ಹಳಗನ್ನಡ ಕಾವ್ಯಗಳನ್ನು ಹೇಗೆ ಓದಬೇಕು ಮತ್ತು ಹೇಗೆ ಬೋಧಿಸಬೇಕು ಎಂಬದರ ಬಗ್ಗೆ ರಾಜ್ಯದ ಹೆಸರಾಂತ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಶಿಬಿರ ಏರ್ಪಡಿಸಲಾಗಿದೆ. ಕನ್ನಡ ಭಾಷಾ ಅಧ್ಯಾಪಕರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಪದವಿಪೂರ್ವ ಕಾಲೇಜು ಉಪನ್ಯಾಸಕರು ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಕನ್ನಡ ಐಚ್ಛಿಕ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 40 ಮಂದಿಗೆ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಮೊದಲು ನೋಂದಾಯಿಸಿಕೊಂಡ 40 ಶಿಬಿರಾರ್ಥಿಗಳಿಗೆ ಆದ್ಯತೆ ನೀಡಲಾಗುವದು. ಜೊತೆಗೆ ಶಿಬಿರದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಮಧ್ಯಾಹ್ನದ ಊಟ ಹಾಗೂ ಓಓಡಿ ಸೌಲಭ್ಯವಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಬಿ.ಎಸ್. ಲೋಕೇಶ್ ಸಾಗರ್ ದೂರವಾಣಿ ಸಂಖ್ಯೆ 8277066123 ಸಂಪರ್ಕಿಸಬಹುದಾಗಿದೆ.