ಗೋಣಿಕೊಪ್ಪ ವರದಿ, ಜ. 31: ಪೊನ್ನಂಪೇಟೆಯ ಅಂಬೇಡ್ಕರ್ ಕಲಾ ಯುವತಿ ಮಂಡಳಿ ಸಂಘದ ಸದಸ್ಯರು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ನಡೆಸುವ ಯುವಜನ ಮೇಳ ಹಾಗೂ ಯುವಜನೋತ್ಸವದಲ್ಲಿ ಭಾಗವಹಿಸಿ ಹೆಚ್ಚು ಬಹುಮಾನಗಳನ್ನು ಪಡೆದಿದ್ದಾರೆ ಎಂದು ಅಧ್ಯಕ್ಷೆ ನಿರ್ಮಲ ತಿಳಿಸಿದ್ದಾರೆ.

ಸಂಘದ ಸದಸ್ಯರು ನೆಹರು ಯುವ ಕೇಂದ್ರ ಆಯೋಜಿಸುವ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳುವ ಮೂಲಕ ಕಲಾ ಪ್ರದರ್ಶನದಲ್ಲಿ ತೊಡಗಿಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗ್ರಾಮ ಮಟ್ಟದಲ್ಲಿ ಮಹಿಳೆಯರ ಬಲವರ್ದನೆ ಮಂಡಳಿಯ ಉದ್ದೇಶವಾಗಿದೆ ಎಂದು ಹೇಳಿದರು. ಮಂಡಳಿಗೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಉತ್ತಮ ಸಂಘ ಎಂಬ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಜಿ. ನಿರ್ಮಲ ಅವರಿಗೆ ವೈಯಕ್ತಿಕ ಪ್ರಶಸ್ತಿ ಸಿಕ್ಕಿದೆ. ರಾಜ್ಯದಾದ್ಯಂತ ನಡೆದ ಯುವಜನೋತ್ಸವದಲ್ಲಿ ಪ್ರಶಸ್ತಿ ದೊರೆತಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸದಸ್ಯರುಗಳಾದ ಪಲ್ಲವಿ, ಲಶ್ಮಿತಾ, ನಿತ್ಯಾ ಹಾಗೂ ರಮ್ಯ ಇದ್ದರು.