ಮಡಿಕೇರಿ, ಜ. 31: ಕೊಡಗು ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರು ಸೋಮವಾರಪೇಟೆ ತಾಲೂಕು ಪಂಚಾಯತ್ ಸಿಬ್ಬಂದಿ ರಂಜಿತ್ ಅವರಿಗೆ ಹಲ್ಲೆ ಮಾಡಿದ್ದು, ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದರೂ, ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿರುವ ಸೋಮವಾರಪೇಟೆ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಅಧಿಕಾರಿಯನ್ನು ತಕ್ಷಣ ಬಂಧಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.