ನಾಪೆÉÇೀಕ್ಲು, ಜ. 30: ಕ್ರೀಡೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆದುದರಿಂದ ಯುವ ಜನತೆ ಕ್ರೀಡೆಯತ್ತ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ಕರೆ ನೀಡಿದರು.ನಾಪೆÇೀಕ್ಲುವಿನ ಡೆಕ್ಕನ್ ಯೂತ್ ಕ್ಲಬ್ ವತಿಯಿಂದ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅಥಿತಿಯಾಗಿ ಆಗಮಿಸಿದ ನಾಪೆÉÇೀಕ್ಲು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿ ಜಿಲ್ಲೆಯಲ್ಲಿ ಉತ್ತಮವಾದ ಕ್ರೀಡಾ ಪಟುಗಳಿದ್ದು ಇವರಿಗೆ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ಸಿಗದಿರುವದು ವಿಷಾದನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡೆಕ್ಕನ್ ಯೂತ್ ಕ್ಲಬ್ ಅಧ್ಯಕ್ಷ ಮತ್ತು ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಉಪಾಧ್ಯಕ್ಷ ಕಾಳೇಯಂಡ ತಿಮ್ಮಯ್ಯ, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ, ಬಿ.ಜೆ.ಪಿ. ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಕಾಫಿ ಬೆಳೆಗಾರ ಅರೆಯಡ ರತ್ನ ಪೆಮ್ಮಯ್ಯ, ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎ. ಹಂಸ. ಮೊೈದು ಕೊಟ್ಟಮುಡಿ, ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಖುರೇಶಿ, ರಷೀದ್, ಎನ್.ಕೆ. ಪ್ರಭು, ದಾನಿ ಆಶ್ರಫ್, ಹ್ಯಾರೀಸ್, ಪೈಸಲ್, ಸಾಹಿದ್, ಜಾಫರ್, ಆಸ್ಕರ್, ಅಜರುದ್ದೀನ್, ಇದ್ದರು.

ಸಮಾರೋಪ

ನಾಪೆÇೀಕ್ಲು ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಸ್ಥಳೀಯ ಡೆಕ್ಕನ್ ಯೂತ್ ಕ್ಲಬ್ ವತಿಯಿಂದ ನಡೆದ 25ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಅವರು ಮಾತನಾಡಿದರು. ಗ್ರಾಮೀಣ ಕ್ರೀಡೆ ಮತ್ತು ಕ್ರೀಡಾ ಪಟುಗಳಿಗೆ ಮೂಲಭೂತ ಸೌಲಭ್ಯದ ಕೊರತೆಯಿದೆ. ಕ್ರೀಡಾ ಪ್ರಾಧಿಕಾರ ನಿಷ್ಕ್ರೀಯವಾಗಿದೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಕ್ರೀಡೆಗೆ ಮತ್ತು ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯ ನೀಡುವದರೊಂದಿಗೆ ಕ್ರೀಡಾ ಪ್ರಾಧಿಕಾರವನ್ನು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ಮಾಡಲಾಗುವದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡೆಕ್ಕನ್ ಯೂತ್ ಕ್ಲಬ್‍ನ ಅಧ್ಯಕ್ಷ ಎಂ.ಎ. ಮನ್ಸೂರ್ ಅಲಿ ವಹಿಸಿದರು.

ವೇದಿಕೆಯಲ್ಲಿ ಮೂರ್ನಾಡು ಗೌತಮ್ ಫ್ರೆಂಡ್ಸ್ ತಂಡದ ನಾಯಕ ಬಲ್ಲಚಂಡ ಗೌತಮ್, ಎನ್.ಕೆ. ಪ್ರಭು, ಫೈಸಲ್, ಟಿ.ಎ. ಮಹಮ್ಮದ್ ಹನೀಫ್, ಶಾಹಿದ್, ಜಾಫರ್, ಅಸ್ಕರ್, ಅಜರುದ್ದೀನ್ ಇದ್ದರು. ಮೂರ್ನಾಡು ಗೌತಮ್ ಫ್ರೆಂಡ್ಸ್ ತಂಡ ಪ್ರಥಮ ಸ್ಥಾನ ಪಡೆದು ಟ್ರೋಫಿ ಮತ್ತು ನಗದು ಬಹುಮಾನ ಪಡೆದರೆ, ಕೊಟ್ಟಮುಡಿ ಜೀನತ್ ತಂಡ ದ್ವಿತೀಯ ಬಹುಮಾನ ಪಡೆಯಿತು.