ಸೋಮವಾರಪೇಟೆ, ಜ. 30: ಸಮೀಪದ ನೇರುಗಳಲೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಪ್ರೌಢಶಾಲೆಯ ದಶಮಾನೋತ್ಸವ ಸಮಾರಂಭದಲ್ಲಿ ಶಿಕ್ಷಕರುಗಳನ್ನು ಗ್ರಾಮಸ್ಥರು ಸನ್ಮಾನಿಸಿದರು.ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಬಿ.ಎ. ಜೀವಿಜಯ, ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ಗ್ರಾ.ಪಂ. ಅಧ್ಯಕ್ಷ ತಿಮ್ಮಯ್ಯ, ಉಪಾಧ್ಯಕ್ಷ ದಿವಾಕರ, ಶನಿವಾರಸಂತೆ ವಿಘ್ನೇಶ್ವರ ಶಾಲೆಯ ಅಧ್ಯಾಪಕ ಜಯಕುಮಾರ್, ತಾ.ಪಂ. ಮಾಜೀ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಎಸ್‍ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಗ್ರಾ.ಪಂ. ಸದಸ್ಯೆ ಲೀಲಾವತಿ, ಸುಜಾತ ಚಂಗಪ್ಪ ಸೇರಿದಂತೆ ಗ್ರಾಮಸ್ಥರು, ಶಾಲೆಯ ಶಿಕ್ಷಕರುಗಳನ್ನು ಸನ್ಮಾನಿಸಿ ಅಭಿನಂದಿಸಿದರು.

ಪ್ರೌಢಶಾಲೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಇಬ್ರಾಹಿಂ, ಲೀಲಾವತಿ, ಉಮೇಶ್, ಸುನೀತಾ, ರತ್ನಾಕರ, ತೇಜಾಕ್ಷಿ, ಆಸಿಯಾಬಾನು, ಚಂದ್ರಾವತಿ ಅವರುಗಳನ್ನು ಗ್ರಾಮಸ್ಥರು ಅಭಿನಂದಿಸಿದರು.