ಮಡಿಕೇರಿ, ಜ. 31: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವಿಶೇಷ ಘಟಕ ಗಿರಿಜನ ಉಪಯೋಜನೆಯಡಿಯಲ್ಲಿ ಗುರು ಶಿಷ್ಯ ಪರಂಪರೆಯ ಯಕ್ಷಗಾನ ನಾಟ್ಯ ತರಬೇತಿಯ ಸಮಾರೋಪ ಸಮಾರಂಭವು ತಾ. 2 ರಂದು ಬೆಳಿಗ್ಗೆ 9.30 ಗಂಟೆಗೆ ಬೆಳಕುಮಾನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಬೆಳಕುಮಾನಿ ಹಿ.ಪ್ರ.ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬಿರುಮಣನ ಬಸಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಿ.ಸಿ. ಚೆನ್ನಪ್ಪ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.