ಶನಿವಾರಸಂತೆ: ಶಿಕ್ಷಣ ಸಂಸ್ಥೆಯ ವಾರ್ಷಿಕ ಸಾಧನೆಯ ಸಂಕೇತವೇ ಶಾಲಾ ವಾರ್ಷಿಕೋತ್ಸವ ಆಚರಣೆಯಾಗಿದೆ ಎಂದು ಕಿತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೂರ್ತಿ ಅಭಿಪ್ರಾಯಪಟ್ಟರು.
ಕಿತ್ತೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೆ, ಪೋಷಕರಿಗೆ ಏರ್ಪಡಿಸಿದ್ದ ವಿವಿಧ ಆಟೋಟಗಳ ಸ್ಪರ್ಧೆಯಲ್ಲಿ ಹಾಗೂ ಸಾಂಸ್ಕøತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹಿರಿಯ ಸಹಕಾರಿ ಕೆ.ವಿ. ಮಂಜುನಾಥ್ ಹಾಗೂ ಮುಖ್ಯ ಶಿಕ್ಷಕಿ ರೇಖಾ ಮಾತನಾಡಿದರು.
ಗ್ರಾಮ ಪಮಚಾಯಿತಿ ಸದಸ್ಯೆ ವಾಣಿ, ಪ್ರಮುಖರಾದ ಲೋಕೇಶ್, ಗಣೇಶ್ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಸಹ ಶಿಕ್ಷಕರಾದ ಅಶ್ವಿನಿ ಮತ್ತು ದಿನೇಶ್ ಉಪಸ್ಥಿತರಿದ್ದರು.