ಕೂಡಿಗೆ, ಜ. 31: ಹುಲುಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಹಾಗೂ ಶಾಲಾ ನೂತನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಧ್ವಜಾರೋಹಣ ನೆರವೇರಿಸಿ, ದಿನದ ಮಹತ್ವ ಕುರಿತು ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್ ನೂತನ ಅಕ್ಷರ ದಾಸೋಹ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ತಮ್ಮ ಆರೋಗ್ಯದ ದೃಷ್ಟಿಯಿಂದ ಸರ್ಕಾರ ವಿವಿಧ ಯೋಜನೆಯನ್ನು ಕೈಗೊಂಡಿದ್ದು, ಅಕ್ಷರ ದಾಸೋಹದ ಯೋಜನೆಯು ಉತ್ತಮವಾಗಿದ್ದು, ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತ, ಸದಸ್ಯರಾದ ವೆಂಕಟೇಶ್, ಶಿವ ನಂಜಪ್ಪ, ಸರೋಜಮ್ಮ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.