ಸೋಮವಾರಪೇಟೆ, ಜ. 30: ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ನಾ ಟಕದ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲು ಸ್ತುವಾರಿ ಸಮಿತಿ ಗಳ ಸಮನ್ವಯ ವೇದಿಕೆಯ ವತಿಯಿಂದ ಕ್ಷೇತ್ರ ಭೇಟಿ ಕಾರ್ಯಕ್ರಮ ನಡೆಯಿತು.ಮೈಸೂರಿನ ಆರ್.ಎಲ್. ಹೆಚ್.ಪಿ. ಸಂಸ್ಥೆ ವತಿಯಿಂದ ಸಂವಾದ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಸಂಚಾಲಕ ನಾಗೇಂದ್ರ ಮಾತನಾಡಿ, ಸರಕಾರಿ ಶಾಲೆಗಳ ಸಬಲೀಕರಣ ಹಾಗೂ ಶಾಲೆಗಳ ಅಭಿವೃದ್ಧಿಗಾಗಿ ಸಮಗ್ರ ಅಧ್ಯಯನ ಮಾಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಶಾಲೆಯಾಗಿದ್ದರೂ, ಇಲ್ಲಿ ಉತ್ತಮ ಶಾಲಾಭಿವೃದ್ದಿ ಸಮಿತಿ ಇರುವದರಿಂದ ಶಾಲೆಯು ಇನ್ನಷ್ಟು ಅಭಿವೃದ್ಧಿಯನ್ನು ಹೊಂದಲಿದೆ ಎಂದರು.

ಕಾರ್ಯಕ್ರಮದಲ್ಲಿ ಪರಿಸರ ಕಾಳಜಿ ಕುರಿತು ಸದಸ್ಯರು ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಅಗತ್ಯವಾದ ಶಿಕ್ಷಣ ಮತ್ತು ಮಾಧ್ಯಮ ಆಯ್ಕೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.

ಎಸ್.ಡಿ.ಎಂ.ಸಿ. ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷ ನಾಗೇಶ್ ಮಾತನಾಡಿ, ಪ್ರತಿ ಜಿಲ್ಲೆಯಲ್ಲಿಯೂ ಮಕ್ಕಳಿಗೆ ಸಮಾನ ಶಿಕ್ಷಣ ಅಗತ್ಯವಿದೆ. ಸರಕಾರ ಈ ನಿಟ್ಟಿನಲ್ಲಿ ಪ್ರಯತ್ನಿಸ ಬೇಕೆಂದು ಅಭಿಪ್ರಾಯಿಸಿದರು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಸಿದ್ಧಲಿಂಗಪ್ಪ, ಸಿಆರ್‍ಪಿ ಚಿಣ್ಣಪ್ಪ, ಮುಖ್ಯ ಶಿಕ್ಷಕಿ ಸುನಿತಾ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಯಶೋಧಾ ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.