ಶ್ರೀಮಂಗಲ, ಜ. 30: ಪೊನ್ನಂಪೇಟೆ ತಾಲೂಕು ಪುನರಚನೆಯ ಬಗ್ಗೆ ಪ್ರಸಕ್ತ ವರ್ಷದ ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಘೋಷಣೆ ಮಾಡುವ ನಿಟ್ಟಿನಲ್ಲಿ, ಮತ್ತು ಸಚಿವ ಸಂಪುಟದ ಸಭೆಯಲ್ಲಿ ಈ ವಿಚಾರ ಮಂಡನೆ ಮಾಡಲು ಪೂರಕವಾಗಿ ತಾಲೂಕು ಹೋರಾಟ ಸಮಿತಿಯ ನೇತೃತ್ವದ ನಿಯೋಗ ಬೆಂಗಳೂರಿಗೆ ತೆರಳಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲು ನಿರ್ಣಯ ಕೈಗೊಳ್ಳಲಾಯಿತು.

ಪೊನ್ನಂಪೇಟೆ ಕೊಡವ ಸಮಾಜದ ರಿಕ್ರಿಯೇಷನ್ ಕ್ಲಬ್ ಸಭಾಂಗಣದಲ್ಲಿ ತಾಲೂಕು ಹೋರಾಟ ಸಮಿತಿಯ ಕಾರ್ಯಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಅಭಿಪ್ರಾಯ ಪಡೆದು ಈ ನಿರ್ಣಯ ಕೈಗೊಳ್ಳಲಾಯಿತು.

ಅರುಣ್ ಮಾಚಯ್ಯನವರು ಮಾತನಾಡಿ, ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ತಾಲೂಕು ಹೋರಾಟ ಸಮಿತಿಯಿಂದ ನೀಡಿದ ಮನವಿಗೆ ಸಕರಾತ್ಮಕವಾಗಿ ಸ್ಪಂಧಿಸಿದ್ದು, ಇದಲ್ಲದೆ ಮೈಸೂರಿನಲ್ಲಿ ಮುಖ್ಯಮಂತ್ರಿಯವರನ್ನು ಮತ್ತೆ ಭೇಟಿ ಮಾಡಿದ ಸಂದರ್ಭ ಬಜೇಟ್‍ನಲ್ಲಿ ಪೊನ್ನಂಪೇಟೆ ತಾಲೂಕು ರಚನೆಗೆ ಬೇಕಾದ ಅನುದಾನವನ್ನು ಮೀಸಲಿಡುವಂತೆ ಮನವಿ ಮಾಡಿದ್ದೇವೆ. ಈ ಸಂದರ್ಭ ಅವರ ಪುತ್ರ ಡಾ.ಯತೀಂದ್ರವರಿಗೆ ಈ ಕಡತದ ಅನುಸರಣೆ ಮಾಡುವಂತೆ ಸೂಚಿಸಿದ್ದಾರೆ. ಬಜೆಟ್‍ನಲ್ಲಿ ಅನುದಾನ ಮೀಸಲಿರಿಸಿದರೆ ತಾಲೂಕು ಅಧಿಕೃತ ಘೋಷಣೆ ಮಾಡಿದಂತೆ ಆಗುತ್ತದೆ. ಇಂದಿನ ಸಭೆಯ ನಿರ್ಣಯದಂತೆ ಜಿಲ್ಲೆಯ ಪೊನ್ನಂಪೇಟೆ ತಾಲೂಕು ಹೋರಾಟ ಸಮಿತಿ ಹಾಗೂ ಕುಶಾಲನಗರ ತಾಲೂಕು ರಚನೆಯ ಹೋರಾಟ ಸಮಿತಿಯ ನಿಯೋಗ ಜಂಟಿಯಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತರಾಮ್, ಎಂ.ಎಲ್.ಸಿ ವೀಣಾ ಅಚ್ಚಯ್ಯ ಸಹಿತ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲು ಎಲ್ಲಾ ಪ್ರಯತ್ನ ಮಾಡಲು ಅಗತ್ಯ ಕ್ರಮಕೈಗೊಳ್ಳಲÁಗುವದು. ಅಲ್ಲದೆ, ಈ ವಿಚಾರವನ್ನು ಸಚಿವ ಸಂಪುಟದಲ್ಲಿಯೂ ಸಹ ಮಂಡಿಸಿ ತಾಲೂಕು ಘೋಷಣೆ ಮಾಡಲು ಒತ್ತಾಯಿಸಲು ಒತ್ತಾಯಿಸಲಾಗುವ ದೆಂದು ಹೇಳಿದರು.

ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಮಾಂಗೇರ ಪದ್ಮಿನಿ ಪೊನ್ನಪ್ಪ ಮಾತನಾಡಿ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಪೊನ್ನಂಪೇಟೆ ತಾಲೂಕು ರಚನೆಯ ಬಗ್ಗೆ ಕಂದಾಯ ಇಲಾಖೆಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ವರದಿ ಕೇಳಿದ್ದು, ಈ ನಿಟ್ಟಿನಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ತಾಲೂಕು ರಚನೆಗೆ ಸೂಕ್ತ ಶಿಫಾರಸ್ಸು ಮಾಡಿ ಸಚಿವ ಸಂಪುಟದಲ್ಲಿ ಇಡಲು ಮನವರಿಕೆ ಮಾಡಲು ಕ್ರಮಕೈಗೊಳ್ಳಲಾಗುವದು. ಪೊನ್ನಂಪೇಟೆ ತಾಲೂಕು ಹೋರಾಟ ರಾಜಕೀಯ ರಹಿತವಾಗಿದೆ. ಆದರೆ, ಕಾಂಗ್ರೆಸ್ ಪಕ್ಷದಿಂದಲೂ ನಮ್ಮದೇ ಸರ್ಕಾರ ರಾಜ್ಯದಲ್ಲಿ ಆಡಳಿತದಲ್ಲಿರುವದರಿಂದ ಸರ್ಕಾರದ ಮೇಲೆ ಒತ್ತಡ ಹೇರಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ. ತಾ. 29ರಂದು ಮಡಿಕೇರಿಯಲ್ಲಿ ನಡೆದ ಕಾಂಗ್ರೆಸ್ ವೀಕ್ಷಕರ ಸಭೆಯಲ್ಲಿ ಜಿಲ್ಲೆಯ ಎರಡು ತಾಲೂಕು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಲಾಗಿದೆ ಎಂದು ಹೇಳಿದರು.

ಜನಪ್ರತಿನಿಧಿಗಳಿಂದಲೇ ತಾಲೂಕು ರಚನೆಗೆ ಹಿಂದೇಟು ಆರೋಪ: ತಾಲೂಕು ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಅರುಣ್ ಮಾಚಯ್ಯ ತಮ್ಮ ಮಾತಿನಲ್ಲಿ ಜನಪ್ರತಿನಿಧಿ ಗಳಿಂದಲೇ ಈ ಪೊನ್ನಂಪೇಟೆ ತಾಲೂಕು ಅಗತ್ಯತೆ ಇಲ್ಲ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದರಿಂದಲೇ ತಾಲೂಕು ರಚನೆ ನೆನೆಗುದಿಗೆ ಬಿದ್ದಿದೆ ಎಂದು ಹೇಳಿದÀರು.

ಈ ಸಂದರ್ಭ ಸಭೆಯಲ್ಲಿದ್ದ ಹಲವರು ಮತ್ತು ಹಿರಿಯ ರಂಗಕರ್ಮಿ ಅಡ್ಡಂಡ ಕಾರ್ಯಪ್ಪ ಅವರು ಆ ಜನಪ್ರತಿನಿಧಿಗಳು ಯಾರು ಎಂದು ಹೇಳಿ. ಜನರಿಗೆ ಅವರ ನೈಜ ಬಣ್ಣ ತಿಳಿಯಲಿ ಎಂದು ಒತ್ತಾಯಿಸಿದರು. ಆದರೆ, ಅದಕ್ಕೆ ಒಪ್ಪದ ಅರುಣ್ ಮಾಚಯ್ಯ ಅವರು ಈ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ. ಈಗ ಸಭೆಯಲ್ಲಿ ಹೇಳಿದರೆ ಅದು ರಾಜಕೀಯವಾಗುತ್ತದೆ ಎಂದು ಸಮಜಾಯಿಷಿಕೆ ನೀಡಿದರು.

ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಹೋರಾಟ ಸಮಿತಿಯ ಸಂಚಾಲಕ ಮಾಚಿಮಾಡ ಎಂ.ರವೀಂದ್ರ ಅವರು ಜಿಲ್ಲೆಗೆ ಸಿಎಂ ಭೇಟಿ ಸಂದರ್ಭ ತಾಲೂಕು ಸಮಿತಿಯಿಂದ ನೀಡಿದ ಮನವಿಗೆ ಅವರು ಸ್ಪಂದಿಸಿದ್ದು, ಸರ್ಕಾರದ ಮಟ್ಟದಲ್ಲಿ ಒತ್ತಡ ಹಾಕಿ ವ್ಯವಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖ ರಾಗಬೇಕಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಪೊನ್ನಂಪೇಟೆ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಪೊಕ್ಕಳಿಚಂಡ ಪೂಣಚ್ಚ, ತಾ.ಪಂ ಸದಸ್ಯೆ ಆಶಾ ಜೇಮ್ಸ್ ಹಾಜರಿದ್ದರು. ಸಭೆಯಲ್ಲಿ ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಚೊಟ್ಟೆಕ್‍ಮಾಡ ರಾಜೀವ್ ಬೋಪಯ್ಯ, ಪ್ರಮುಖರಾದ ಮಳವಂಡ ಅರವಿಂದ್ ಕುಟ್ಟಪ್ಪ, ಗೋಣಿಕೊಪ್ಪ ಕೊಡವ ಸಮಾಜದ ಸಣ್ಣುವಂಡ ವಿಶ್ವನಾಥ್, ಜೆಡಿಎಸ್ ಮುಖಂಡ ಕೆ.ಆರ್.ಸುರೇಶ್, ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ, ಗೋಣಿಕೊಪ್ಪ ಎಪಿಎಂಸಿ ಮಾಜಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಕೊಡಗು ಬೆಳೆಗಾರ ಒಕ್ಕೂಟದ ಅಧ್ಯಕ್ಷ ಕೈಬಿಲೀರ ಹರೀಶ್ ಅಪ್ಪಯ್ಯ, ಮಾಜಿ ಅಧ್ಯಕ್ಷ ಅಜ್ಜಮಾಡ ಶಂಕರು ನಾಚಪ್ಪ, ಪೊನ್ನಂಪೇಟೆ ಎಪಿಎಂಸಿ ಅಧ್ಯಕ್ಷ ಮಲ್ಲಮಾಡ ಪ್ರಭು ಪೂಣಚ್ಚ, ಮಾಜಿ ಜಿ.ಪಂ ಸದಸ್ಯ ಎಂ.ಎಸ್.ಕುಶಾಲಪ್ಪ, ತಾ.ಪಂ ಮಾಜಿ ಸದಸ್ಯ ಕೋಳೆರ ದಯಾ ಚಂಗಪ್ಪ, ಅನಿತಾ ಕಾರ್ಯಪ್ಪ, ಕೊಡಗು ಹೆಗ್ಗಡೆ ಸಮಾಜದ ಉಪಾಧ್ಯಕ್ಷ ಕೊರಕುಟ್ಟಿರ ಸರ ಚಂಗಪ್ಪ, ಶ್ರೀಮಂಗಲ ಗ್ರಾ.ಪಂ ಮಾಜಿ ಅಧ್ಯಕ್ಷೆ ಮುತ್ತಮ್ಮ ನಾಚಪ್ಪ, ಕೊಟ್ಟಗೇರಿಯ ಬಾಚಮಾಡ ಜನರ್ಧನ ರಾಜು, ಹುದಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೋದಂಡ ಸನ್ನು, ಕಾಟಿಮಾಡ ಜಿಮ್ಮಿ ಅಯ್ಯಣ್ಣ, ನಿವೃತ್ತ ಎಸ್‍ಪಿ ಮುಕ್ಕಾಟೀರ ಚೊಟು ಅಪ್ಪಯ್ಯ, ಕೊದೇಂಗಡ ವಿಠಲ ಮತ್ತಿತರರು ಮಾತನಾಡಿದರು.