ಸುಂಟಿಕೊಪ್ಪ, ಜ.30 : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ಶೈಕ್ಷಣಿಕ ಕಾರ್ಯಗಾರ ಮತ್ತು ರಾಜ್ಯ ಮಟ್ಟದ ಪದಾಧಿಕಾರಿಗಳ ಶೈಕ್ಷಣಿಕ ಸಮಾವೇಶ ಫೆ.1 ರಂದು ಬೆಂಗಳೂರು ಕೆಂಪೆಗೌಡ ರಸ್ತೆಯ ಶಿಕ್ಷಕರ ಸದನದಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಶೈಕ್ಷಣಿಕ ಕಾರ್ಯಗಾರ ಮತ್ತು ರಾಜ್ಯ ಮಟ್ಟದ ಪದಾಧಿಕಾರಿಗಳ ಶೈಕ್ಷಣಿಕ ಸಮಾವೇಶದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ನೇರವೇರಿಸಲಿದ್ದಾರೆ. ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಉಪ ಸಭಾಪತಿಗಳಾದ ಮಂತಿಬ್ಬೇಗೌಡ ದಿನದರ್ಶಿಯನ್ನು ಬಿಡುಗಡೆ ಗೊಳಿಸಲಿದ್ದಾರೆ, ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಉಪಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ ಅವರು ವಹಿಸಲಿದ್ದಾರೆ. ನಿಕಟಪೂರ್ವ ರಾಜ್ಯ ಪದಾಧಿಕಾರಿ ಗಳಿಗೆ ಸನ್ಮಾನವನ್ನು ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರು ನೇರವೇರಿಸಲಿದ್ದಾರೆ.

ಸಾರ್ಥಕ ಬದುಕು ಕವನ ಸಂಕಲನ ಬಿಡುಗಡೆಯನ್ನು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ರಾಮಚಂದ್ರ ಗೌಡರು ನೇರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಮಂಜೆಗೌಡರು, ಕ.ರಾ.ಪ್ರಾ.ಶಾ.ಶಿ.ಸಂಘ ಬಸವರಾಜ ಗುರಿಕಾರ, ಪ್ರಧಾನ ಕಾರ್ಯದರ್ಶಿ ಎಂ.ಎನ್.ಚಂದ್ರೇಗೌಡ, ತಿಮ್ಮಯ್ಯ ಪುರ್ಲೆ ಅಧ್ಯಕ್ಷರು, ಕ.ರಾ.ಸ.ಪ.ಪೂ.ಕಾ. ಉಪನ್ಯಾಸಕರ ಸಂಘ, ಕೆ.ಜಿ.ಆಂಜಿನಪ್ಪ ಅಧ್ಯಕ್ಷರು ಕ.ರಾ.ಶಿಕ್ಷಣಾಧಿಕಾರಿಗಳ ಸಂಘ ಬೆಂಗಳೂರು ಇವರುಗಳು ಆಗಮಿಸಲಿದ್ದಾರೆ. ಮಧ್ಯಾಹ್ನ 3.30 ರಿಂದ 5.30 ರ ವರೆಗೆ ಸರ್ವಸದಸ್ಯರ ಮಹಾಸಭೆಯನ್ನು ಆಯೋಜಿ ಸಲಾಗಿದೆ. ಕ.ರಾ.ಪ್ರೌ.ಶಾ.ಸ.ಶಿ. ಸಂಘದ ಅಧ್ಯಕ್ಷರಾದ ಹೆಚ್.ಕೆ. ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಮೂರು ತಾಲೂಕುಗಳ ಹಾಗೂ ಜಿಲ್ಲಾ ಪದಾಧಿಕಾರಿಗಳು ಹಾಗೂ ಆಸಕ್ತ ಶಿಕ್ಷಕರುಗಳು ಆಗಮಿಸುವ ಮೂಲಕ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಬೇಕೆಂದು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ಸಿ.ಟಿ.ಸೋಮಶೇಖರ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಜಿ.ಕುಮಾರ್ ರವರು ಮನವಿ ಮಾಡಿಕೊಂಡಿದ್ದಾರೆ. ಸಮಾರಂಭ ದಲ್ಲಿ ಭಾಗವಹಿಸುವ ಪದಾಧಿಕಾರಿ ಗಳಿಗೆ ಮತ್ತು ಆಸಕ್ತ ಶಿಕ್ಷಕರಿಗೆ ಅನ್ಯ ಕಾರ್ಯನಿಮಿತ್ತ (ಓಓಡಿ) ಸೌಲಭ್ಯವಿದೆ ಎಂದು ತಿಳಿಸಿದ್ದಾರೆ.