ಸೋಮವಾರಪೇಟೆ, ಜ. 30: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿ ಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾಜೀ ಸೈನಿಕ ಎ.ಕೆ. ಮಾಚಯ್ಯ ಅವರನ್ನು ಸನ್ಮಾನಿಸ ಲಾಯಿತು. ತಾಲೂಕು ತಹಶೀಲ್ದಾರ್ ಮಹೇಶ್, ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಸದಸ್ಯೆ ತಂಗಮ್ಮ, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾ ಸೇರಿದಂತೆ ಇತರರು ಉಪಸ್ಥಿತರಿದ್ದು, ಸನ್ಮಾನಿಸಿದರು. ಸೈನಿಕರಾಗಿ ಸೇವೆ ಸಲ್ಲಿಸಿ ನಿವೃತ್ತ ರಾದ ಬಳಿಕವೂ ಅನೇಕ ಸಮಾಜ ಮುಖಿ ಸಂಘಟನೆ ಗಳಲ್ಲಿ ತೊಡಗಿಸಿ ಕೊಂಡಿರುವ ಅಭಿಮಠ ಬಾಚಳ್ಳಿ ಗ್ರಾಮದ ಎ.ಕೆ. ಮಾಚಯ್ಯ ದೇವರಬನ ಹೋರಾಟ ಸಮಿತಿಯ ಅಧ್ಯಕ್ಷರಾಗಿ, ಇಲ್ಲಿನ ಜೈಜವಾನ್ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಯಾಗಿಯೂ ಸೇವೆ ಸಲ್ಲಿಸಿದ್ದಾರೆ.