ಗೋಣಿಕೊಪ್ಪ ವರದಿ: ಇಲ್ಲಿನ ಕಾವೇರಿ ಕಾಲೇಜು ವಿದ್ಯಾರ್ಥಿ ಸಂಘದ ಸಮಾರೋಪ ತಾ. 3 ರಂದು ನಡೆಯಲಿದೆ.
ಕೊಡವ ಸಾಹಿತ್ಯದಲ್ಲಿ ಗುರುತಿಸಿಕೊಂಡಿರುವ ಡಾ. ಎಂ.ಪಿ. ರೇಖಾ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಥಮ ಅಂಕ ಪಡೆದಿರುವ ಜಿ. ಪವಿತ್ರ, ಪಿ.ಯು.ಸಿ.ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವ ವಿ. ಅಮೃತವರ್ಷಿಣಿ ಇವರುಗಳನ್ನು ಸನ್ಮಾನಿಸಲಾಗುವದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಎ.ಸಿ. ಗಣಪತಿ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾ ರೋಟರಿ ಗರ್ವನರ್ ಎಂ.ಎಂ. ಸುರೇಶ್ ಚಂಗಪ್ಪ, ಕಾವೇರಿ ಎಜುಕೇಷನ್ ಸೊಸೈಟಿ ಉಪಾಧ್ಯಕ್ಷ ಸಿ.ಬಿ. ದೇವಯ್ಯ, ಕಾರ್ಯದರ್ಶಿ ಕೆ.ಜಿ. ಉತ್ತಪ್ಪ ಭಾಗವಹಿಸಲಿದ್ದಾರೆ.