ಮಡಿಕೇರಿ, ಜ. 30: ನಾಡಿನಾದ್ಯಂತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಶಾಲಾ ಕಾಲೇಜು, ಸಂಘ-ಸಂಸ್ಥೆ, ಸಾರ್ವಜನಿಕವಾಗಿ ಆಚರಿಸಿದ ಕುರಿತು ವಿವರ ಇಲ್ಲಿದೆ.ಮಡಿಕೇರಿ: ಕೊಡಗು ಪತ್ರಿಕಾ ಭವನದ ವತಿಯಿಂದ 69ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಪತ್ರಿಕಾ ಭವನ ಟ್ರಸ್ಟ್‍ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್. ಮನುಶೆಣೈ ನೆರವೇರಿಸಿದರು. ಈ ಸಂದರ್ಭ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್, ಟ್ರಸ್ಟಿಗಳಾದ ಟಿ.ಪಿ. ರಮೇಶ್, ಶ್ರೀಧರ ಹೂವಲ್ಲಿ, ವ್ಯವಸ್ಥಾಪಕಿ ಯಮುನಾ ಸಿಬ್ಬಂದಿಗಳಾದ ರಾಜೇಶ್, ಸವಿತಾ ಮತ್ತಿತರರು ಹಾಜರಿದ್ದರು.ಕೂಡಿಗೆ: ಕೂಡಿಗೆ ಸೈನಿಕ ಶಾಲೆಯಲ್ಲಿ 69ನೇ ಗಣರಾಜ್ಯೋತ್ಸವವನ್ನು ಜನರಲ್ ತಿಮ್ಮಯ್ಯ ಪೆರೇಡ್ ಮೈದಾನದಲ್ಲಿ ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಆರ್ ಆರ್ ಲಾಲ್ ಧ್ವಜಾರೋಹಣ ಮಾಡಿದರು. ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನದ ಮೂಲಕ ಮುಖ್ಯ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು. ಸಮಾರಂಭದಲ್ಲಿ ಶಾಲೆಯ ಶೈಕ್ಷಣಿಕ ವಿಭಾಗದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಗೆ ಭಾಜನರಾಗಿದ್ದ ಕೆಡೆಟ್ ಯುವನ್ ಶಂಕರ್ ಮತ್ತು ಶಾಲೆಯ ಅತ್ಯುತ್ತಮ ಕ್ರೀಡಾಪಟು ಮತ್ತು ಆಲ್‍ರೌಂಡರ್ ಪ್ರಶಸ್ತಿಗೆ ಭಾಜನರಾಗಿದ್ದ ಕೆಡೆಟ್ ಆದಿತ್ಯ ಕುಮಾರ್‍ರವರಿಗೆ ಪ್ರಶಸ್ತಿ ಪತ್ರ ಮತ್ತು ಪಾರಿತೋಷಕವನ್ನು ಪ್ರದಾನ ಮಾಡಿದರು. ಶಾಲಾ ಸಭಾಂಗಣದಲ್ಲಿ ವಿವಿದ ಕ್ಲಬ್‍ಗಳ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಉಪ ಪ್ರಾಂಶುಪಾಲ ಸ್ಕ್ವಾಡ್ರನ್ ಲೀಡರ್ ಡಿ ಮ್ಯಾಥ್ಯು, ಬೋಧಕ, ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡಿದ್ದರು.

ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜೋತ್ಸವ ಮತ್ತು ಶಾಲಾ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಬಿ.ಎಸ್. ದಿನೇಶ್ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕ ಸಣ್ಣಸ್ವಾಮಿ ಸ್ವಾಗತಿಸಿದರು. ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು. ಗ್ರಾಮಸ್ಥರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಜಿ.ಪಂ. ಸದಸ್ಯ ಲತೀಫ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಭಾರತಿ, ಮತ್ತು ಪಿ.ಡಿ.ಓ. ಶ್ಯಾಂ, ಸದಸ್ಯೆ ಡಾಟಿ, ಸಿ.ಆರ್.ಪಿ. ಸತ್ಯನಾರಾಯಣ, ಕಾಶಿ, ಬಿ.ಎಸ್. ಧನಪಾಲ್, ಕೆ.ಎನ್. ಚಂದ್ರಶೇಖರ್ ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕಿ ಮರಿಯಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳಿಂದ ಮತ್ತು ಸಾರ್ವಜನಿಕರಿಂದ ಮನರಂಜನೆ ಕಾರ್ಯಕ್ರಮ ನಡೆಯಿತು.

ಸುಂಟಿಕೊಪ್ಪ: ಸೌರ್ವಭೌಮತ್ವ, ಜಾತ್ಯತೀತ ಸಮಾಜವಾದಿ ಪ್ರಜಾಸತ್ತಾತ್ಮಕವಾಗಿ ಶ್ರೇಷ್ಟ ಸಂವಿಧಾನ ಭಾರತ ದೇಶ ಪಡೆದುಕೊಂಡಿದೆ ಎಂದು ಹೇಳಿದರು. ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ಆಚರಿಸಲಾದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಪ್ರೌಢಶಾಲೆಯ ನೌಕರರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಂ ಆಗಮಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಗಣರಾಜ್ಯೋತ್ಸವ ಶುಭಾಶಯ ಕೋರಿದರು. ತಾ.ಪಂ. ಸದಸ್ಯೆ ವಿಮಲಾವತಿ, ಗ್ರಾ.ಪಂ. ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಸದಸ್ಯರುಗಳಾದ ಸಿ. ಚಂದ್ರ, ನಾಗರತ್ನ ಸುರೇಶ್, ಶಿವಮ್ಮ ಮಹೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಬಿ.ಐ. ಭವಾನಿ ಮಾಜಿ ಉಪಾಧ್ಯಕ್ಷ ಬಿ.ಎಸ್. ಸದಾಶಿವ ರೈ, ವರ್ಕ್‍ಶಾಪ್ ಮಾಲೀಕರ ಸಂಘದ ಅಧ್ಯಕ್ಷ ವಿ.ಎ. ಸಂತೋಷ್, ಕೃಷಿ ಇಲಾಖೆಯ ಅಧಿಕಾರಿ ಪಿ.ಎಸ್. ಬೋಪಯ್ಯ, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರುಗಳಾದ ಸೆಲ್ವರಾಜ್, ಗೀತಾ ಪಾರ್ಥ, ವಿರಾ, ಬಾಲಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್. ಸುನೀಲ್, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘದ ಮಹಿಳೆಯರು, ಆಟೋ ಚಾಲಕರು ಹಾಗೂ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸ್ತ್ರೀಶಕ್ತಿ ಸಂಘದ ಸದಸ್ಯೆ ಪ್ರೇಂ ಪ್ರಾರ್ಥಿಸಿ, ರಾಷ್ಟ್ರೀಯ ಹಬ್ಬಗಳ ಬಿ.ಡಿ. ರಾಜು ರೈ ಸ್ವಾಗತಿಸಿ, ಶಿಕ್ಷಕಿ ಸೌಭಾಗ್ಯ ನಿರೂಪಿಸಿ, ಪಿ.ಎಸ್. ಬೋಪಯ್ಯ ವಂದಿಸಿದರು. ಒಡೆಯನಪುರ: ಸಮಿಪದ ಅಂಕನಹಳ್ಳಿ ಸರಕಾರಿ ಪ್ರೌಢಶಾಲೆಗೆ 8, 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ರಾತ್ರಿವೇಳೆಯಲ್ಲಿ ತರಗತಿ ತೆಗೆದುಕೊಳ್ಳಲು ಅನುಕೂಲವಾಗುವ ಸಲುವಾಗಿ ಹಂಡ್ಲಿ ಗ್ರಾಮದ ಉದ್ಯಮಿ ಹೆಚ್.ವಿ. ವೇದಕುಮಾರ್ ರೂ. 17 ಸಾವಿರ ಮೌಲ್ಯದ ಸೋಲಾರ್ ದೀಪವನ್ನು ಅದಾನವಾಗಿ ನೀಡಿದ್ದರು. ಈ ಹಿನ್ನೆಲೆ ಪ್ರೌಢಶಾಲಾ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದಾನಿ ವೇದಕುಮಾರ್ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಜಿ.ಎಂ. ಹೇಮಂತ್, ಎಸ್‍ಡಿಎಂಸಿ ಅಧ್ಯಕ್ಷ ಎ.ಎನ್. ವಸಂತ್, ಆಲೂರು-ಸಿದ್ದಾಪುರ ಗ್ರಾ.ಪಂ. ಸದಸ್ಯೆ ಶಶಿಕಲಾ ಮುಂತಾದವರಿದ್ದರು.*ಗೋಣಿಕೊಪ್ಪಲು: ಬಾಳೆಲೆ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಗಣರಾಜ್ಯೋತ್ಸವ ಮತ್ತು ವಿದ್ಯಾಸಂಸ್ಥೆ ವಾರ್ಷಿಕೋತ್ಸವದಲ್ಲಿ ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಧ್ವಜಾರೋಹಣ ಮಾಡಿ ಮಾತನಾಡಿದರು.

ಬೇಂಗೂರಿನ ತಜ್ಞ ವೈದ್ಯ ಮಾಪಂಗಡ ಬೆಳ್ಳಿಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎನ್. ಪ್ರಥ್ಯು, ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ ಮಾತನಾಡಿದರು. ಉಪಾಧ್ಯಕ್ಷ ಕಾಯಮಾಡ ರಾಜ, ಕೋಶಾಧಿಕಾರಿ ಎ.ಬಿ. ದೇವಯ್ಯ, ಸಹಕಾರ್ಯದರ್ಶಿ ಪೋಡಮಾಡ ಮೋಹನ್, ಸಹ ಕೋಶಾಧಿಕಾರಿ ಆಲೆಮಾಡ ಕರುಂಬಯ್ಯ, ನಿರ್ದೇಶಕರಾದ ಅಳಮೇಂಗಡ ಸುರೇಶ್ ಸುಬ್ಬಯ್ಯ, ಮೇಚಂಡ ಪೆಮ್ಮಯ್ಯ, ಮಾಚಂಗಡ ಸುಜಾ ಪೂಣಚ್ಚ, ಕಾಟಿಮಾಡ ಶರೀನ್ ಮುತ್ತಣ್ಣ, ಬಾಳೆಲೆ ಕ್ಲಸ್ಟರ್ ಕೇಂದ್ರದ ಸಿಆರ್‍ಪಿ, ಚಿಕ್ಕದೇವರು, ಪ್ರಾಂಶುಪಾಲ ಕೆ.ಪಿ. ಪೊನ್ನಮ್ಮ, ಮುಖ್ಯ ಶಿಕ್ಷಕ ಕೆ. ಚಂದ್ರಶೇಖರ್ ಹಾಜರಿದ್ದರು. ಡಾ. ಬೆಳ್ಳಿಯಪ್ಪ, ಬಾನಂಡ ಪ್ರಥ್ಯು ಅವರನ್ನು ಸನ್ಮಾನಿಸಲಾಯಿತು. ಡಾ. ಜೆ. ಸೋಮಣ್ಣ ಸ್ವಾಗತಿಸಿದರು. ರಾಘವೇಂದ್ರ ನಿರೂಪಿಸಿದರು. ತಿಮ್ಮರಾಜು ವಂದಿಸಿದರು.

ಊರಿನ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ಬಳಿಕ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕøತಿಕ ಕಾರ್ಯಕ್ರಮ ಗಮನಸೆಳೆಯಿತು.

ಮೂರ್ನಾಡು: ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ 69ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬಲ್ಲಮಾವಟಿ ಗ್ರಾಮದ ಲೆ. ಕರ್ನಲ್ ಬೊಟ್ಟೋಳಂಡ ಎಂ. ಮುತ್ತಪ್ಪ ಧ್ವಜಾರೋಹಣ ಮಾಡಿದರು.

ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಪಳಂಗಂಡ ಮುದ್ದಪ್ಪ, ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ, ನಿರ್ದೇಶಕ ಬಡುವಂಡ ಸುಬ್ರಮಣಿ, ಈರಮಂಡ ಸೋಮಣ್ಣ, ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಭಾಗೀರಥಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಎ.ಎಸ್. ರಶ್ಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಸ್.ಡಿ. ಪ್ರಶಾಂತ್, ಪದವಿಪೂರ್ವ ಕಾಲೇಜಿನ ಎನ್‍ಸಿಸಿ ಅಧಿಕಾರಿ ಪಳಂಗಂಡ ಕಾವೇರಪ್ಪ, ಪ್ರೌಢಶಾಲೆ ಎನ್‍ಸಿಸಿ ಅಧಿಕಾರಿ ಎ.ಜಿ. ಗಣೇಶ್ ಉಪಸ್ಥಿತರಿದ್ದರು.

ವಿದ್ಯಾಸಂಸ್ಥೆಯ ಎನ್‍ಸಿಸಿ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಮುಖ್ಯ ಅತಿಥಿಗಳು ಗೌರವ ರಕ್ಷೆ ಸ್ವೀಕರಿಸಿದರು. ಬೊಟ್ಟೋಳಂಡ ಹನ್ಸ ಮುತ್ತಪ್ಪ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಹರೀಶ್ ಕಿಗ್ಗಾಲು ದಿನದ ಮಹತ್ವ ಕುರಿತು ತಿಳಿಸಿದರು.

ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಸಾದೇರ ದರ್ಶನ್ ಸ್ವಾಗತಿಸಿ, ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಕುಮುದ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಮುಶೀದಾ ವಂದಿಸಿದರು.

ಚೆಟ್ಟಳ್ಳಿ: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅಧ್ಯಕ್ಷೆ ಪಿ.ವಿ. ವತ್ಸಲ ನೆರವೇರಿಸಿದರು.

ಭಾರತ ಸಂವಿಧಾನವನ್ನು ಎಲ್ಲರೂ ಪಾಲಿಸಿ ಸಹಬಾಳ್ವೆಯಿಂದ ಜಾತಿ, ಬೇಧ ಮರೆತು ಒಂದಾಗಬೇಕಾಗಿ ಕರೆ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಟಿ ವಿಶ್ವನಾಥ್, ಸಿಬ್ಬಂದಿಗಳಾದ ಪ್ರಶಾಂತ್, ಶಾಯಿರಾ, ಕಂದಸ್ವಾಮಿ, ಸದಸ್ಯರುಗಳಾದ ಎನ್.ಎಸ್. ರವಿ, ನಾರಾಯಣ, ಮಹಮ್ಮದ್ ರಫಿ ಮತ್ತು ಸಾರ್ವಜನಿಕರು ಹಾಜರಿದ್ದರು. ಸಿಬ್ಬಂದಿ ಚಂದ್ರಶೇಖರ್ ಸ್ವಾಗತಿಸಿ, ವಂದಿಸಿದರು.ಸಿದ್ದಾಪುರ: ಸಿದ್ದಾಪುರದ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಗಣರಾಜೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಶಿಕ್ಷಕ ಪಿ.ಎ. ಅಯ್ಯಣ್ಣ ನೆರವೇರಿಸಿದರು. ದಿನದ ಮಹತ್ವದ ಬಗ್ಗೆ ಪ್ರೌಢಶಾಲಾ ಮುಖ್ಯ ಉಪಾಧ್ಯಾಯ ಬಾಬುನಾಯಕ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ಆರ್. ರವಿಶಂಕರ್, ಲಯನ್ಸ್ ಸಂಸ್ಥೆಯ ನಿರ್ದೇಶಕ ಕೆ.ಎಸ್. ಸುನಿಲ್, ಡಾ. ಜೀವನ್ ಇತರರು ಹಾಜರಿದ್ದರು. ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ತಾಲೀಮುಗಳು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.ಕರ್ಣಂಗೇರಿ: ಕರ್ಣಂಗೇರಿ ಗ್ರಾಮದ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷೆ ಸರಸ್ವತಿ ಧ್ವಜಾರೋಹಣ ಮಾಡಿದರು.

ಕಾರ್ಯಕ್ರಮದಲ್ಲಿ ಕೆ. ನಿಡುಗಣೆ ಗ್ರಾ.ಪಂ. ಸದಸ್ಯ ಜಾನ್ಸ್‍ನ್ ಪಿಂಟೋ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಸದಸ್ಯರಾದ ಹೆಚ್.ಆರ್. ಪ್ರೇಮ್ ಕುಮಾರ್ ಹಾಗೂ ದೇವಕಿ ಉಪಸ್ಥಿತರಿದ್ದರು.

ಸ್ಥಳೀಯ ಗ್ರಾಮದ ನಿವಾಸಿಗಳಾದ ಕೆ.ಕೆ. ಶಶಿಕುಮಾರ್ ಮತ್ತು ಮಾಜಿ ಸದಸ್ಯ ವಿಕ್ಟರ್ ಡಿಸೋಜ ಬಹುಮಾನವನ್ನು ಪ್ರಾಯೋಜಿಸಿದ್ದರು.

ಶಾಲೆಯ ಮುಖ್ಯ ಶಿಕ್ಷಕ ಜನಾರ್ದನ, ವಾಸು, ಅಂಗನವಾಡಿ ಶಿಕ್ಷಕಿ ಜಯಂತಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ನಾಪೆÇೀಕ್ಲು: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 69ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಕೇಲೇಟಿರ ಪುಷ್ಪ ವಹಿಸಿದ್ದರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಕೆ.ಎಂ. ರಮೇಶ್, ಸದಸ್ಯರಾದ ಚಂದ್ರ, ವಾಣಿ, ರೀಟಾ, ಪ್ರಬಾರ ಮುಖ್ಯ ಶಿಕ್ಷಕ ಸುಬ್ರಮಣಿ, ಶಿಕ್ಷಕಿಯರಾದ ಚಂದ್ರಕಲಾ, ಗಿರಿಜಾ, ಪುಷ್ಪಾವತಿ, ನೇತ್ರಾವತಿ, ನಸೀಮಾ ಇದ್ದರು.

ಎಮ್ಮೆಮಾಡು: ಎಮ್ಮೆಮಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿ.ಹೆಚ್. ಮೊೈದು ನೆರವೇರಿಸಿದರು.

ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ರಮ್ಲಾ ಶಾಹಿದಾ, ಶಿಕ್ಷಕರಾದ ಪಿ.ಆರ್. ಅಯ್ಯಪ್ಪ, ಕಿರಣ್, ಮಾರುತಿ ಇದ್ದರು.

ಕಡಗದಾಳು: ಶ್ರೀ ಬೊಟ್ಲಪ್ಪ ಯುವ ಸಂಘದ ವತಿಯಿಂದ 69ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಗನವಾಡಿ ಶಿಕ್ಷಕಿ ಬಿ.ಐ. ಪುಷ್ಪ ನೆರವೇರಿಸಿದರು. ದಿನದ ಮಹತ್ವ ಕುರಿತು ವಿದ್ಯಾರ್ಥಿನಿ ಪ್ರತೀಕ್ಷ ಭಾಷಣ ಮಾಡಿದರು.

ಸಂಘದ ಸದಸ್ಯ ಸಿ.ಎಂ ರಾಕೇಶ್ ಗಣರಾಜ್ಯೋತ್ಸವದ ಕುರಿತು ಮಾಹಿತಿ ನೀಡಿದರು. ಯುವ ಸಂಘದ ಅಧ್ಯಕ್ಷ ಸಿ.ಕೆ. ಮಂಜು ಅಧ್ಯಕ್ಷ ಭಾಷಣ ಮಾಡಿದರು. ಅವಿನಾಶ್ ಬೊಟ್ಲಪ್ಪ ಸ್ವಾಗತಿಸಿದರು, ಬಿ.ಎಂ. ಶಿವಕಾಂತ್ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಯುವ ಸಂಘದ ಸದಸ್ಯರು, ಸ್ಥಳೀಯರು ಹಾಜರಿದ್ದರು.ಕೂಡಿಗೆ: ಕೂಡಿಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಧ್ವಜಾರೋಹಣ ನೆರವೇರಿಸಿ, ದಿನದ ಮಹತ್ವದ ಕುರಿತು ಮಾತನಾಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್, ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಸ್ವಾಮಿನಾಯಕ ಇದ್ದರು.ಕಗ್ಗೋಡ್ಲು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಗ್ಗೋಡ್ಲುವಿನಲ್ಲಿ 69ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ತಾಲೂಕು ಯುವ ಒಕ್ಕೂಟ ಮಡಿಕೇರಿ, ನೆಹರೂ ಯುವ ಕೇಂದ್ರ ಮಡಿಕೇರಿ, ಕಾವೇರಿ ಯುವಕ ಸಂಘ ಕಗ್ಗೋಡ್ಲು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಗ್ಗೋಡ್ಲು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಗ್ಗೋಡ್ಲು ಇವರ ವತಿಯಿಂದ ಸ್ವಚ್ಛತಾ ಆಂದೋಲನ ಮಾಡಲಾಯಿತು.

ಶಾಲೆಯ ನಿವೃತ್ತ ಶಿಕ್ಷಕಿ ಹೆಚ್.ಎ. ನೀಲಾ ಸ್ವಚ್ಛ ಭಾರತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಶಾಲಾ ಮಕ್ಕಳಿಗೆ ಮತ್ತು ಸ್ಥಳೀಯ ಅಂಗನವಾಡಿ ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ, ಛದ್ಮವೇಶ, ಭಾಷಣ ಸ್ಪರ್ಧೆ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. ಕಳೆದ ಸಾಲಿನಲ್ಲಿ 7ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಬಹುಮಾನ ಹಾಗೂ ವಿಶೇಷವಾಗಿ ಶಾಲಾ ಮಕ್ಕಳಿಗೆ ಗಣಿತದ ಅನುಭವದಿಂದ ಕಲಿಕೆಗಾಗಿ ಸ್ಥಾಪಿಸಿದ ಸ್ಟುಡೆಂಟ್ ಬ್ಯಾಂಕ್ ವತಿಯಿಂದ ಈಗಾಗಲೇ 7ನೇ ತರಗತಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅವರ ಉಳಿಕೆ ಹಣವನ್ನು ಹಿಂತಿರುಗಿಸಲಾಯಿತು.

ಕಾರ್ಯಕ್ರಮಗಳು ಶಾಲಾ ಮುಖ್ಯ ಶಿಕ್ಷಕಿ ಸಿ.ಎಂ. ಜಯಶ್ರೀ ಹಾಗೂ ಕಾವೇರಿ ಯುವ ಸಂಘದ ಮುಂದಾಳತ್ವದಲ್ಲಿ ನಡೆದವು. ಸ್ತ್ರೀ ಶಕ್ತಿ ಸಂಘ, ಕಾವೇರಿ ಯುವಕ ಸಂಘ, ಮಹಿಳಾ ಸಮಾಜ, ಸ್ಥಳೀಯ ಜನಪ್ರತಿನಿಧಿಗಳು, ಭಗವತಿ ಜಾಗರಣಾ ವೇದಿಕೆ, ಆಶಾ ಕಾರ್ಯಕರ್ತೆ, ಅಂಗನವಾಡಿ ಶಿಕ್ಷಕಿ, ಕಾರ್ಯಕರ್ತೆಯರು ಹಾಗೂ ಎಸ್.ಡಿ.ಎಂ.ಸಿ. ಸದಸ್ಯರು, ಹಳೇ ವಿದ್ಯಾರ್ಥಿ ಸಂಘ ಹಾಗೂ ಗ್ರಾಮಸ್ಥರು ಹಾಜರಿದ್ದರು.

ವೀರಾಜಪೇಟೆ: ಕರ್ನಾಟಕ ಸಂಘದಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಮೂಕಚಂಡ ಅರುಣ್ ಅಪ್ಪಣ್ಣ ದಿನದ ಮಹತ್ವದ ಕುರಿತು ಮಾತನಾಡಿದರು.

ಈ ಸಂದರ್ಭ ಉಪಾಧ್ಯಕ್ಷ ಗಿರೀಶ್ ಪೂಣಚ್ಚ. ನಿರ್ದೇಶಕರುಗಳಾದ ಕೆ. ಗಣೇಶ್ ತಮ್ಮಯ್ಯ, ಸಿ.ಪಿ. ಕಾವೇರಪ್ಪ, ಕುಸುಮ ಸೋಮಣ್ಣ, ಸುರೇಶ್, ಎಂ.ಸಿ. ಅಶೋಕ್ ಮತ್ತಿತರರು ಪಾಲ್ಗೊಂಡಿದ್ದರು.

ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಆಶ್ರಮ ಶಾಲೆಯಲ್ಲಿ 69ನೇ ಗಣರಾಜೋತ್ಸವವನ್ನು ಆಚರಿಸಲಾಯಿತು. ಜಿ.ಪಂ. ಸದಸ್ಯ ಲತೀಫ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಧ್ವಜಸ್ತಂಬದ ಮುಂದೆ ಅಲ್ಲಿನ ಶಿಕ್ಷಕಿಯರು ಹೂವಿನಲ್ಲಿ ಭಾರತದ ಭೂಪಟವನ್ನು ರಚಿಸಿ ಎಲ್ಲರ ಗಮನಸೆಳೆದರು. ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ಭಾರತಿ, ಉಪಾಧ್ಯಕ್ಷೆ ಲೀಲಾವತಿ, ಸದಸ್ಯರು ಹಾಜರಿದ್ದರು. ಶಾಲಾ ಶಿಕ್ಷಕಿ ಎಂ.ಎಸ್. ಶಶಿ ಸ್ವಾಗತಿಸಿದರು. ಲ್ಯಾಂಪ್ಸ್ ಸಹಕಾರ ಸಂಘದ ನಿರ್ದೇಶಕ ಬಿ.ಕೆ. ಮೋಹನ್ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಪೋಷಕರು ಸೇರಿ ಗ್ರಾಮದ ಪ್ರಮುಖ ಬೀದಿಯಲ್ಲಿ ಪಥಸಂಚಲನ ನಡೆಸಿದರು.ವೀರಾಜಪೇಟೆ: ದೇಶದ 69ನೇ ಗಣರಾಜ್ಯೋತ್ಸವ ಅಂಗವಾಗಿ ಸದ್ಭಾವನಾಮಂಚ್ ವೀರಾಜಪೇಟೆ ಶಾಖೆಯ ಆಶ್ರಯದಲ್ಲಿ ಸ್ಥಳೀಯ ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.

ಈ ಸಂದರ್ಭ ಮಂಚ್‍ನ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ, ಕಾರ್ಯಾಧ್ಯಕ್ಷ ಎ.ಎನ್. ರವಿ ಉತ್ತಪ್ಪ, ಉಪಾಧ್ಯಕ್ಷ ಜೆ.ಎನ್. ಪುಷ್ಪರಾಜ್ ಜೈನ್, ಎ.ಸಿ. ಚೋಪಿ ಜೋಸೆಫ್, ಸದಸ್ಯರುಗಳಾದ ಕೆ.ಪಿ. ರಷೀದ್, ಕೆ.ಪಿ. ಕುಂಞÂ ಮುಹಮ್ಮದ್, ಎನ್.ಕೆ. ಅಬ್ದುಲ್ ರೆಹಮಾನ್, ಅಬ್ದುರ್ರವೂಫ್ ಹಾಜರಿದ್ದರು.

ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಪ್ರಬಾರ ವೈದ್ಯಾಧಿಕಾರಿ ಡಾ. ಆನಂದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ. ಹೇಮ, ಹಿರಿಯ ಶುಶ್ರೂಷಕಿ ಧನಲಕ್ಷ್ಮಿ ಹಾಜರಿದ್ದರು. ಮಂಚ್‍ನ ಕಾರ್ಯದರ್ಶಿ ಪಿ.ಕೆ. ಅಬ್ದುಲ್ ರೆಹೆಮಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಹಮ್ಮದ್ ಶುಹೈಬ್ ವಂದಿಸಿದರು.