ಗೋಣಿಕೊಪ್ಪ ವರದಿ, ಜ. 30 : ಪೊನ್ನಂಪೇಟೆ ಮಾತಾಯಿ ಪುರುಷರ ಸ್ವಸಹಾಯ ಸಂಘದ ವತಿಯಿಂದ ಫೆ. 13 ರಂದು ನಡೆಯಲಿರುವ ಮಹಾಶಿವರಾತ್ರಿ ಪ್ರಯುಕ್ತ್ತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸದಸ್ಯ ಎಂ.ಬಿ. ಅನೀಶ್ ತಿಳಿಸಿದ್ದಾರೆ.
ಪೊನ್ನಂಪೇಟೆ ಬಸ್ ನಿಲ್ದಾಣದ ಎದುರು ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶಿವನ ಆರಾಧನೆಯೊಂದಿಗೆ ಸಾಂಸ್ಕøತಿಕ, ಸರ್ವಧರ್ಮ ಸಮ್ಮೇಳನ, ಪ್ರತಿಭಾ ಪುರಸ್ಕಾರ ಮತ್ತು ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಘದ ಅಧ್ಯಕ್ಷ ಟಿ. ಪಿ. ಸುರೇಶ್ ಮಾತನಾಡಿ, ಅಂದು ರಾತ್ರಿ 7 ಕ್ಕೆ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಧರ್ಮಗುರು ಗಳು ಪಾಲ್ಗೊಂಡು ಆಚರಣೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ನಂತರ ಅನ್ನದಾನ ನಡೆಯಲಿದೆ. ರಾತ್ರಿ 9 ರಿಂದ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಲು ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪೊನ್ನಂಪೇಟೆ ಸರ್ಕಾರಿ ಶಿಕ್ಷಣ ಕೇಂದ್ರಗಳಲ್ಲಿ ಹೆಚ್ಚು ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದು. ಈ ವಿಭಾಗದಲ್ಲಿ ಪ್ರಾಥಮಿಕ, ಪ್ರೌಢÀ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವದು ಎಂದರು.
ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸ್ಪರ್ಧಿಸುವವರು ಫೆಬ್ರವರಿ 10 ರ ಒಳಗೆ ಹೆಸರು ನೋಂದಾಯಿಸಿ ಕೊಳ್ಳಬೇಕು. ಉತ್ತಮ ಪ್ರದರ್ಶನ ನೀಡುವ ಕಲಾವಿಧರಿಗೆ ಬಹುಮಾನ ನೀಡಲಾಗು ವದು ಎಂದರು. ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಟಿ.ಪಿ. ಸುರೇಶ್, ಕಾರ್ಯಾಧ್ಯಕ್ಷ ಹೆಚ್.ಬಿ. ಸುರೇಶ್, ಖಜಾಂಜಿ ಬಿ.ಕೆ. ಅಣ್ಣಪ್ಪ ಇದ್ದರು.