ಮಡಿಕೇರಿ, ಫೆ. 1: ಪುಣ್ಯ ಕ್ಷೇತ್ರವಾಗಿರುವ ತಲಕಾವೇರಿ ಹಾಗೂ ಭಾಗಮಂಡಲವನ್ನು ಪ್ರವಾಸೀ ತಾಣಗಳ ಪಟ್ಟಿಯಿಂದ ಕೈಬಿಡಬೇಕೆಂದು ಜಿಲ್ಲಾ ಪಂಚಾಯತ್‍ನ ಸಾಮಾನ್ಯ ಸಭೆಯ ನಿರ್ಣಯವನ್ನು ಸ್ವಾಗತಿಸುವದಾಗಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಮೊಣ್ಣಪ್ಪ ಹೇಳಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಎರಡು ಕ್ಷೇತ್ರಗಳನ್ನು ಪ್ರವಾಸೀ ತಾಣದ ಪಟ್ಟಿಯಿಂದ ತೆಗೆದು ಹಾಕಬೇಕು. ಧಾರ್ಮಿಕ ಕ್ಷೇತ್ರವಾಗಿ ಪರಿಗಣನೆ ಮಾಡಬೇಕು. ಈಗಾಗಲೇ ಪ್ರವಾಸಿಗರಿಂದ ಕ್ಷೇತ್ರಗಳಲ್ಲಿ ಜಿಲ್ಲೆಯ ಜನತೆಯ ಭಾವನೆಗಳಿಗೆ ಧಕ್ಕೆಯುಂಟಾಗುವಂತಹ ಪ್ರಕ್ರಿಯೆಗಳು ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾದರೆ ಕ್ಷೇತ್ರಗಳನ್ನು ಪ್ರವಾಸಿ ತಾಣದ ಪಟ್ಟಿಯಿಂದ ಕೈಬಿಡಬೇಕೆಂದು ಅವರು ಆಗ್ರಹಿಸಿದ್ದಾರೆ.