ಮಡಿಕೇರಿ, ಫೆ.1: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್‍ನ ಮಡಿಕೇರಿ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ತಾ. 4 ರಂದು ನಗರದ ಬಾಲಭವನದಲ್ಲಿ ನೇತ್ರದಾನ, ರಕ್ತದಾನ, ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಮಡಿಕೇರಿ ವಲಯ ಸಮಿತಿ ಅಧ್ಯಕ್ಷ ಆನಂದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರ ಅಂದು ಬೆಳಿಗ್ಗೆ 9.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ವಸಂತ ಕುಲಾಲ್ ವಹಿಸಲಿದ್ದಾರೆ ಎಂದು ತಿಳಿಸಿದರು.

ಶಿಬಿರದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಬ್ದುಲ್ ಅಜೀಜ್, ನೇತ್ರ ತಜ್ಞ ಡಾ. ಕಿರಣ್ ಭಟ್, ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ, ಮಕ್ಕಳ ತಜ್ಞ ಡಾ. ನವೀನ್ ಕುಮಾರ್, ದಂತ ವೈದ್ಯ ಡಾ.ದೀಪಕ್, ಆಯುಷ್ ವೈದ್ಯಾಧಿಕಾರಿ ಡಾ. ಶೈಲಜಾ, ಹೋಮಿಯೋಪತಿ ವೈದ್ಯಾಧಿಕಾರಿ ಡಾ.ಅರುಣ್ ಅಸೂಟಿ, ಸ್ತ್ರೀರೋಗ ತಜ್ಞೆ ಡಾ.ಸೌಮ್ಯ, ಮಾನಸಿಕ ರೋಗ ತಜ್ಞರಾದ ಡಾ. ರೂಪೇಶ್, ಡಾ. ಮನೋಜ್ ಪಾಲ್ಗೊಳ್ಳಲಿದ್ದಾರೆ ಎಂದÀರು.

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎಂ.ಯು.ಅಶ್ರಫÀÅನ್ನೀಸ ಮಾತನಾಡಿ, ಶಿಬಿರದ ಸಂದರ್ಭ ಅಸೋಸಿಯೇಷನ್‍ನ ಸದಸ್ಯತ್ವ ನೋಂದಾವಣೆ ಮತ್ತು ನವೀಕರಣ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ಸಂಘಟನೆ ಮೂಲಕ ಕಳೆದ ಹತ್ತೊಂಭತ್ತು ವರ್ಷಗಳಿಂದ ಟೈಲರ್ಸ್ ವೃತ್ತಿ ಬಾಂಧವರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸುತ್ತಲೇ ಬರಲಾಗುತ್ತಿದೆ. ಅಸಂಘಟಿತ ಕಾರ್ಮಿಕ ವಲಯಕ್ಕೆ ಬರುವ ಟೈಲರ್ಸ್‍ಗಳ ಕಲ್ಯಾಣಕ್ಕಾಗಿ 10 ಕೋಟಿ ರೂ.ಗಳನ್ನು ಮೀಸಲಿಡಬೇಕು ಮತ್ತು ಸ್ಮಾರ್ಟ್ ಕಾರ್ಡ್ ನೀಡಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು. ಬಡ್ಡಿ ರಹಿತ ಸಾಲ ಸೌಲಭ್ಯ, ಟೈಲರ್ಸ್ ವೃತ್ತಿಯನ್ನು ಗುಡಿ ಕೈಗಾರಿಕೆಯೆಂದು ಪರಿಗಣಿಸಿ ಅಗತ್ಯ ನೆರವನ್ನು ಒದಗಿಸಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಕೆಎಸ್‍ಟಿಎ ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ವಸಂತ ಕುಲಾಲ್, ಮಡಿಕೇರಿ ಕ್ಷೇತ್ರ ಸಮಿತಿ ಉಪಾಧ್ಯಕ್ಷೆ ಲತಾ ಶೆಟ್ಟಿ, ನಗರ ವಲಯ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಹಾಗೂ ಕೋಶಾಧಿಕಾರಿ ಸುಧಾಕರ್ ಉಪಸ್ಥಿತರಿದ್ದರು.