ಮಡಿಕೇರಿ, ಫೆ. 1: ಪ್ರಧಾನ ಮಂತ್ರಿಗಳ 15 ಅಂಶಗಳ ಅನುಷ್ಠಾನ ಕಾರ್ಯಕ್ರಮದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಉಸ್ತುವಾರಿ ಸಮಿತಿಗೆ ಜಿ.ಪಂ. ಸದಸ್ಯ ಲತೀಫ್ ಹಾಗೂ ನಗರಸಭಾ ಸದಸ್ಯ ಕೆ.ಜಿ. ಪೀಟರ್ ಅವರುಗಳನ್ನು ನೇಮಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಸಹಿತ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಈ ಸಮಿತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.