ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 69ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ. ಬಿ.ಜೆ. ಮಹೇಂದ್ರ ಅಧ್ಯಕ್ಷತೆ ವಹಿಸಿದ್ದರು. ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.

ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲ ಡಾ. ಕೆ.ಬಿ. ಕಾರ್ಯಪ್ಪ, ವೈದ್ಯಕೀಯ ಅಧೀಕ್ಷಕ ಡಾ. ಅಬ್ದುಲ್ ಅಜೀóಜ್, ಮುಖ್ಯ ಆಡಳಿತಾಧಿಕಾರಿ ಮೇರಿ ನಾಣಯ್ಯ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ಎಂಬಿಬಿಎಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಯವಕಪಾಡಿ ಸ.ಕಿ.ಪ್ರಾ. ಶಾಲೆ: ಯವಕಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಯೋಧ ಲ್ಯಾನ್ಸ್ ನಾಯಕ್ ಕೆ.ಎಸ್. ಕಾರ್ಯಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ ಧ್ವಜಾರೋಹಣ ಮಾಡಿದರು. ಕರ್ತಂಡ ಶೈಲಾ ಕುಟ್ಟಪ್ಪ, ಗ್ರಾ.ಪಂ. ಸದಸ್ಯ ಅಪ್ಪಾರಂಡ ವಿಜು ಪೂಣಚ್ಚ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಶಾಲೆ ವತಿಯಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಳೇ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ನಡೆಸಲಾಯಿತು. ವಿದ್ಯಾರ್ಥಿಗಳಿಂದ ಗಾಯನ, ನೃತ್ಯ, ನಾಟಕ ಮೊದಲಾದ ಚಟುವಟಿಕೆಗಳು ನಡೆದವು.

ನಾಪೋಕ್ಲು ಸರಕಾರಿ ಸಂಯುಕ್ತ ಪ್ರೌಢಶಾಲೆ: ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ದೀರ್ಘಕೇಶಿ ಶಿವಣ್ಣ ಧ್ವಜಾರೋಹಣ ಗೈದು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಶೇಕ್ ಅಹಮ್ಮದ್ ದಿನದ ಮಹತ್ವ ಕುರಿತು ಮಾತನಾಡಿದರು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಸಾವಿತ್ರಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸ್ವಸ್ತಿಕ್ ಸ್ವಸಹಾಯ ಸಂಘದ ಅಧ್ಯಕ್ಷ ಬಿ.ಎನ್. ಜಯರಾಂ, ಶಾಲಾ ಮುಖ್ಯ ಶಿಕ್ಷಕಿ ದೇಚಮ್ಮ, ಶಾಲಾ ಎಸ್‍ಡಿಎಂಸಿ ಉಪಾಧ್ಯಕ್ಷ ಮಂಜುನಾಥ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ದೀರ್ಘಕೇಶಿ ಶಿವಣ್ಣ ಅವರು ದತ್ತಿನಿಧಿಗಾಗಿ ಹತ್ತು ಸಾವಿರ ರೂಪಾಯಿ ಚೆಕ್ಕನ್ನು ಶಾಲೆಗೆ ಹಸ್ತಾಂತರಿಸಿದರು. ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮಡಿಕೇರಿ: ಮಡಿಕೇರಿಯ ರಾಘವೇಂದ್ರ ದೇವಾಲಯದ ಬಳಿಯಿರುವ ಕಲಾ ನಗರ ಸಾಂಸ್ಕøತಿಕ ಕಲಾ ವೇದಿಕೆ ವತಿಯಿಂದ 69ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.

ನಗರಸಭಾ ಸದಸ್ಯ ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಮ್ಮಿ ದೇವಯ್ಯ ಧ್ವಜಾರೋಹಣ ಮಾಡಿದರು. ಧ್ವÀಜಾರೋಹಣ ಸಂದರ್ಭ ಈ ಭಾಗದ ನಾಗರಿಕರು, ಕಿತ್ತೂರು ಚೆನ್ನಮ್ಮ ಮಹಿಳಾ ಸಮಾಜದ ಪದಾಧಿಕಾರಿಗಳು, ಕಲಾ ನಗರ ಸಾಂಸ್ಕøತಿಕ ಕಲಾ ವೇದಿಕೆಯ ಪದಾಧಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಕಲಾ ವೇದಿಕೆಯ ಅಧ್ಯಕ್ಷ ಅಪ್ಪು ಮಹೇಶ್ ವಂದನಾರ್ಪಣೆ ಮಾಡಿದರು.ಕುಶಾಲನಗರ ಪಟ್ಟಣ ಪಂಚಾಯಿತಿ: ಪಟ್ಟಣ ಪಂಚಾಯಿತಿ ನೂತನ ಕಚೇರಿಯಲ್ಲಿ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಧ್ವಜಾರೋಹಣ ನೆರವೇರಿಸಿದರು. ಪಂಚಾಯಿತಿ ಹಿರಿಯ ಸದಸ್ಯರಾದ ಹೆಚ್.ಜೆ. ಕರಿಯಪ್ಪ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಮುಖ್ಯಾಧಿಕಾರಿ ಎ.ಎಂ. ಶ್ರೀಧರ್, ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಡಿ. ಚಂದ್ರು, ಹೆಚ್.ಕೆ. ಪಾರ್ವತಿ, ಸದಸ್ಯರುಗಳಾದ ಎಂ.ಎಂ. ಚರಣ್, ಪ್ರಮೋದ್ ಮುತ್ತಪ್ಪ, ಕವಿತಾ, ಸುರಯ್ಯಭಾನು ಮತ್ತು ಸಿಬ್ಬಂದಿ ವರ್ಗ ಇದ್ದರು. ಗಣರಾಜ್ಯೋತ್ಸವ ಅಂಗವಾಗಿ ಪಟ್ಟಣದ ಸುತ್ತಮುತ್ತಲ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ನಡೆಯಿತು.

* ಕುಶಾಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯೋಪಾಧ್ಯಾಯಿನಿ ರಾಣಿ ಮತ್ತು ಶಿಕ್ಷಕರು ಇದ್ದರು.

* ಕುಶಾಲನಗರ ಜೆಎಂಎಫ್‍ಸಿ ನ್ಯಾಯಾಲಯದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ನ್ಯಾಯಾಧೀಶ ಎಸ್. ನಟರಾಜ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ವಕೀಲರ ಸಂಘದ ಪದಾಧಿಕಾರಿಗಳು ಇದ್ದರು.

* ಕುಶಾಲನಗರದ ಅಂಚೆ ಕಚೇರಿ, ಭಾರತೀಯ ಜೀವ ವಿಮಾ ನಿಗಮ ಕಚೇರಿ ಸೇರಿದಂತೆ ಶಾಲಾ-ಕಾಲೇಜುಗಳು, ಸರಕಾರಿ ಕಚೇರಿಗಳು ಹಾಗೂ ಸಹಕಾರ ಸಂಘಗಳ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಆಚರಿಸಲಾಯಿತು.

* ಕೊಪ್ಪ ಭಾರತಮಾತ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾಲೇಜು ಪ್ರಾಂಶುಪಾಲ ಫಾ. ಜೋಸೆಫ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್ ಧ್ವಜಾರೋಹಣ ನೆರವೇರಿಸಿದರು.

ವಿದ್ಯಾರ್ಥಿಗಳಿಂದ ಪಥಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭ ಉಪ ಪ್ರಾಂಶುಪಾಲ ಫಾ. ಪ್ರತೀಶ್, ಫಾ. ರೆನಿ ಇದ್ದರು. ಅಶ್ವಿನಿ ಸ್ವಾಗತಿಸಿ, ದೀಪಿಕಾ ನಿರೂಪಿಸಿ, ಥಾನ್ಯ ವಂದಿಸಿದರು.

ಕೋಡಂಬೂರು ಜ್ಞಾನಜ್ಯೋತಿ ವಿದ್ಯಾಸಂಸ್ಥೆ: ಶಾಲಾ ಶಿಕ್ಷಕಿ ರಾಜೇಶ್ವರಿ ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಶಾಲಾ ಪ್ರಬಾರ ಮುಖ್ಯ ಶಿಕ್ಷಕಿ ಸ್ಮಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ದಿನದ ಕುರಿತು ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ನಾಪೋಕ್ಲು ಸರ್ಕಾರಿ ಪದವಿಪೂರ್ವ ಕಾಲೇಜು: ಪ್ರೌಢಶಾಲಾ ವಿಭಾಗದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಸೈನಿಕ ಕೊಂಡೀರ ಗಣೇಶ್ ನಾಣಯ್ಯ ಪಾಲ್ಗೊಂಡಿದ್ದರು. ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಿರುವ ಧ್ವಜಸ್ತಂಭವನ್ನು ಉದ್ಘಾಟಿಸಿ ಧ್ವಜಾರೋಹಣ ನೆರವೇರಿಸಿದ ಬಳಿಕ ವಿದ್ಯಾರ್ಥಿಗಳ ಪಥಸಂಚಲನದಲ್ಲಿ ಗೌರವ ವಂದನೆಯನ್ನು ಸ್ವೀಕರಿಸಿ ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ದೇಶದ ಇತಿಹಾಸವನ್ನು ಅರಿತು ಸಂವಿಧಾನದ ನಿಯಮಗಳನ್ನು ಗೌರವಿಸಿ ಶಿಸ್ತಿನ ಪ್ರಜೆಗಳಾಗಿ ಈ ದೇಶದಲ್ಲಿ ಶಾಂತಿ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ ಹಾಗೂ ದಿನದ ಮಹತ್ವದ ಕುರಿತು ಭಾಷಣ ಏರ್ಪಡಿಸಲಾಗಿತ್ತು. ವೇದಿಕೆಯಲ್ಲಿ ಉಪಪ್ರಾಂಶುಪಾಲೆ ಪಿ.ಕೆ.ನಳಿನಿ, ಎಸ್‍ಡಿಎಂಸಿ ಅಧ್ಯಕ್ಷರು, ಶಿಕ್ಷಕ ಮಹಂತೇಶ್‍ಕೋಠಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಕೆ.ಬಿ. ಉಷಾ ರಾಣಿ ಸ್ವಾಗತಿಸಿದರು. ಸಹ ಶಿಕ್ಷಕ ಸದಾನಂದ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಕಸ್ತೂರಿ ಪಿ.ಟಿ. ವಂದಿಸಿದರು.ವೀರಾಜಪೇಟೆ: ಸೈಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ದೇಶದ 69ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಪ್ರಾಂಶುಪಾಲ ರೆ.ಫಾ. ಐಸಕ್ ರತ್ನಾಕರ್ ನಮ್ಮ ದೇಶದ ಸಂವಿಧಾನವು ಜಗತ್ತಿನ ಇತರ ರಾಷ್ಟ್ರಗಳ ಸಂವಿಧಾನಗಳಿಗೆ ಉತ್ತಮ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದೆ ಎಂದರು. ಉಪನ್ಯಾಸಕ ಬಿ.ಎನ್. ಶಾಂತಿಭೂಷಣ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಹೆಚ್.ಆರ್. ಅರ್ಜುನ್ ನಿರೂಪಿಸಿದರು.

ಕರಡ: ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ 69ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ ಶಿವಪ್ಪ, ಸದಸ್ಯರಾದ ಐತಿಚಂಡ ವನಿತ ಪ್ರಕಾಶ್, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಟಿ.ಯು. ಲತ, ಸದಸ್ಯರು, ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.

ಸುಂಟಿಕೊಪ್ಪ: ಕೊಡಗರಹಳ್ಳಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ 69ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ರತಿ ಧ್ವಜಾರೋಹಣವನ್ನು ನೇರವೇರಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಕವಾಯತು ನಡೆಯಿತು. ಸಮಾರಂಭವನ್ನು ಉದ್ದೇಶಿಸಿ ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಜಾನ್‍ರಾಜ್ ಮಾತನಾಡಿದರು. ದಿನದ ಮಹತ್ವದ ಕುರಿತು ಕೆ. ಭಾಗೀರಥಿ ಮಾಹಿತಿ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಬಿ.ಕೆ. ಯಶೋದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಫೀಕ್ ವಹಿಸಿದ್ದರು.

ಈ ಸಂದರ್ಭ ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ್, ಖಜಾಂಚಿ ಪಿ. ಸತೀಶ, ಸಹ ಕಾರ್ಯದರ್ಶಿ ಅಣ್ಣಪ್ಪ, ಗೌರವಾಧ್ಯಕ್ಷ ಕೆ.ವಿ. ಸುನೀಲ್ ಕುಮಾರ್, ಪದಾಧಿಕಾರಿಗಳಾದ ಎ. ವಿಶ್ವ, ಎಸ್.ಕೆ. ಹರೀಶ್, ಬಿ.ಎಸ್. ಯಶವಂತ್, ರಾಜುಶೆಟ್ಟಿ, ಗಿರೀಶ್, ಕೇಶವ, ಲತೀಫ್ ಹಾಗೂ ಮುರುಗೇಶ್ ಮತ್ತಿತರರು ಇದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಸಹ ಶಿಕ್ಷಕಿಯಾದ ಟಿ.ಎಲ್. ಸುಮಾ ನಿರೂಪಿಸಿ, ಕೆ. ವಿಜಯಲಕ್ಷ್ಮಿ ಸ್ವಾಗತಿಸಿ, ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ, ಮಹಿಳೆಯರು ಹಾಗೂ ಪುರುಷರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು.

ಮಡಿಕೇರಿ: ಇಲ್ಲಿನ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 69ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಸ.ಕ.ಇ. ಅಧಿಕಾರಿ ಚಿಕ್ಕಬಸವಯ್ಯ ನೆರವೇರಿಸಿದರು.

ಪ್ರಾರ್ಥನೆಯನ್ನು ವಿದ್ಯಾರ್ಥಿ ಕವನ್ ಕುಮಾರ್ ನೆರವೇರಿಸಿದರು. ನಿಲಯದ ಮೇಲ್ವಿಚಾರಕಿ ಡಿ.ಸಿ. ಪೊನ್ನಮ್ಮ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿ ಶ್ರೀನಿವಾಸ್ ಗಣರಾಜ್ಯೋತ್ಸವ ಕುರಿತು ಮಾತುಗಳನ್ನಾಡಿದರು.ತಾಳತ್ತಮನೆ: ನೇತಾಜಿ ಯುವಕ ಮಂಡಲದಲ್ಲಿ 69ನೇ ವರ್ಷದ ಗಣರಾಜ್ಯೋತ್ಸವದ ಧ್ವಜಾರೋಹಣದಲ್ಲಿ ಯುವಕ ಹಾಗೂ ಯುವತಿ ಮಂಡಳಿಯ ಸದಸ್ಯರು ಭಾಗವಹಿಸಿದ್ದರು.

ಭಾಗಮಂಡಲ: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್‍ಡಿಎಂಸಿ ಅಧ್ಯಕ್ಷ ಅರ್ಜುನ ನೆರವೇರಿಸಿದರು. ದಿನದ ಮಹತ್ವದ ಕುರಿತು ಅತಿಥಿಗಳು ಮಾತನಾಡಿದರು.

ಪ್ರತಿಭಾ ಪರೀಕ್ಷೆ, ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಿದ ಪ್ರತಿಭೆಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಈ ಸಂದರ್ಭ ಮುಖ್ಯ ಶಿಕ್ಷಕ ಎನ್.ಕೆ. ಪ್ರಭು, ಅತಿಥಿಗಳಾಗಿ ಬಳ್ಳಡ್ಕ ಅಪ್ಪಾಜಿ, ಅಮೆ ಸುಬಾಷ್, ಶಿಕ್ಷಕರಾದ ಅರುಣ, ಎಂ.ಕೆ. ಕರುಂಬಯ್ಯ ಹಾಗೂ ಪೋಷಕರು ಉಪಸ್ಥಿತರಿದ್ದರು.

ವೀರಾಜಪೇಟೆ: ದೇವಣಗೇರಿ ಬಿ.ಸಿ. ಪ್ರೌಢಶಾಲೆಯಲ್ಲಿ 69ನೇ ಗಣರಾಜ್ಯೋತ್ಸವದ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಧ್ವಜಾರೋಹಣ ನೆರವೇರಿಸಿದರು.

ಶಾಲಾ ಆಡಳಿತ ಮಂಡಳಿ ಖಜಾಂಚಿ ಅಲ್ಲಪಂಡ ಎ. ಉತ್ತಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸದಸ್ಯ ಮೂಕೊಂಡ ಸಿ. ನಂಜಪ್ಪ, ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆಟೋಟ ಮತ್ತು ಇತರ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ಶಿಕ್ಷಕಿಯರಾದ ಎಸ್. ನಂದಿನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.

ಬಿಟ್ಟಂಗಾಲ: ವೀರಾಜಪೇಟೆ-ಬಿಟ್ಟಂಗಾಲ-ನಾಂಗಾಲ ಗ್ರಾಮದ ಕಲ್ತೋಡು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 69ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕುಪ್ಪಂಡ ಬೋಪಯ್ಯ ಧ್ವಜಾರೋಹಣ ನೆರವೇರಿಸಿದರು. ದಾನಿಗಳಾದ ಕಂಬಿರಂಡ ಬಿ. ಅಯ್ಯಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಬಾರ ಮುಖ್ಯ ಶಿಕ್ಷಕಿ ಟಿ.ಬಿ. ಗಂಗಮ್ಮ ದಿನದ ಮಹತ್ವದ ಕುರಿತು ಮಾತನಾಡಿದರು.

ಆಟೋಟಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು. ಶಾಲೆಯ ದತ್ತಿ ನಿಧಿಗೆ ರೂ. 50,000 ನೀಡಿದ ಕಂಬಿರಂಡ ಬಿ. ಅಯ್ಯಪ್ಪ ಹಾಗೂ ಶಾಲೆಯ ಕೋಣೆಗಳ ಕಾಮಗಾರಿಗೆ ರೂ. 1,50,000 ಉದಾರವಾಗಿ ವೆಚ್ಚ ಮಾಡಿದ ಗೋಣಿಕೊಪ್ಪಲಿನ ಸತ್ಯ ಸಾಯಿ ಟ್ರಸ್ಟ್ ಸಂಸ್ಥೆಯ ಸಹಕಾರವನ್ನು ಸಭೆಯಲ್ಲಿ ಸ್ಮರಿಸಲಾಯಿತು.

ಸಮಾರಂಭದಲ್ಲಿ ಬಲ್ಲಚಂಡ ಗೀತಾ ಪೊನ್ನಪ್ಪ, ಭಜನ್, ಹೆಚ್.ಪಿ. ರಾಧಿಕಾ, ಶಿಕ್ಷಕಿ ಫ್ಯಾನ್ಸಿ ಲೋಬೋ, ಎ.ಬಿ. ಸಾವಿತ್ರಿ ಹಾಜರಿದ್ದರು.ದೊಡ್ಡಕೊಳತ್ತೂರು: ಶನಿವಾರಸಂತೆ ಸಮೀಪದ ದೊಡ್ಡಕೊಳತ್ತೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ತಾಲೂಕು ಪಂಚಾಯಿತಿ ಸದಸ್ಯ ಬಿ.ಎಸ್. ಅನಂತಕುಮಾರ್ ಧ್ವಜಾರೋಹಣ ನೆರವೇರಿಸಿದರು.

ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಿನ್ನಪ್ಪ, ಸದಸ್ಯೆ ಪ್ರಿಯಾ, ಮುಖ್ಯ ಶಿಕ್ಷಕ ಮಹದೇವಪ್ಪ, ಗ್ರಾಮದ ಪ್ರಮುಖರಾದ ಅರುಣ್ ಕುಮಾರ್, ರವಿಕುಮಾರ್, ಅಶ್ರಫ್, ಆನಂದ, ಮೋಹನ್ ಉಪಸ್ಥಿತರಿದ್ದರು.

ಪೊನ್ನೋಲ: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 69ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುಂಡ್ಯೋಳಂಡ ರವಿ ಸೋಮಯ್ಯ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಎ.ಕೆ. ಸುರೇಶ್ ವಹಿಸಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ನಂತರ ವಿದ್ಯಾರ್ಥಿಗಳಿಂದ ಭಾಷಣ, ಗಾಯನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ನಿಯೋಜಿತ ಶಿಕ್ಷಖಿ ಡಿ.ಕೆ. ಲೀಲಾವತಿ ಸ್ವಾಗತಿಸಿ, ವಂದಿಸಿದರು.

ಚಿಕ್ಕಕೊಳತ್ತೂರು: ಶನಿವಾರಸಂತೆ ಸಮೀಪದ ಚಿಕ್ಕಕೊಳತ್ತೂರು ಗ್ರಾಮದ ಬದ್ರಿಯಾ ಮದ್ರಸದಲ್ಲಿ ನಡೆದ 69ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗುರು ಕುಟ್ಟಿಚ್ಚ ಧ್ವಜಾರೋಹಣ ನೆರವೇರಿಸಿದರು.

ಅಧ್ಯಾಪಕ ಕಾಜೂರು ಹಸೈನಾರ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ವಿದ್ಯಾರ್ಥಿಗಳಿಗೆ ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ನಿವೃತ್ತ ಅರಣ್ಯಾಧಿಕಾರಿ ಲಿಂಗರಾಜ್, ಪ್ರಮುಖರಾದ ಜಾನ್ಸನ್, ಖಾದರ್ ದುಬೈ, ಇಬ್ರಾಹಿಂ, ರಜಾಕ್, ಅಬ್ಬಾಸ್, ಪುತ್ತುಚ್ಚ, ಹನೀಫ್, ರಫೀಕ್ ಉಪಸ್ಥಿತರಿದ್ದರು.