ಸಿದ್ದಾಪುರ, ಫೆ. 1: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ದುಬಾರೆ ಹಾಡಿಯ ನಿವಾಸಿಗಳಿಗೆ ಪೌಷ್ಟಿಕ ಆಹಾರಗಳನ್ನು ಶಾಸಕ ಕೆ.ಜಿ. ಬೋಪಯ್ಯ ವಿತರಿಸಿದರು.

ನಂತರ ಮಾತನಾಡಿದ ಅವರು, ಬುಡಕಟ್ಟು ಜನಾಂಗದವರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದರು. ಅಲ್ಲದೇ ತಮ್ಮ ಮಕ್ಕಳಿಗೆ ಸರ್ಕಾರದಿಂದ ಸಿಗುತ್ತಿರುವ ಉಚಿತ ಶಿಕ್ಷಣವನ್ನು ಪೋಷಕರು ಸದುಪಯೋಗ ಪಡೆದುಕೊಂಡು ತಮ್ಮ ಮಕ್ಕಳಿಗೆ ಶಿಕ್ಷಣಕ್ಕೆ ಹೆಚ್ಚಿನ ಒತ್ತಾಸೆಯನ್ನು ನೀಡಬೇಕೆಂದು ಕಿವಿಮಾತು ಹೇಳಿದರು.

ಈ ಸಂದರ್ಭ ತಾ.ಪಂ. ಸದಸ್ಯ ಕೆ.ಎಂ. ಜನೀಶ್, ಗ್ರಾ.ಪಂ. ಸದಸ್ಯ ನವೀನ್, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ, ಬಿ.ಜೆ.ಪಿ. ಮುಖಂಡರುಗಳಾದ ವಿ.ಕೆ. ಲೋಕೇಶ್, ಎಂ.ಎ. ಆನಂದ, ಕಿಶೋರ್, ರೂಪೇಶ್, ಪಂದಿಕಂಡ ಅಶೋಕ್, ಸಿದ್ದಾಪುರ ಸ್ಥಾನೀಯ ಸಮಿತಿಯ ಅಧ್ಯಕ್ಷ ಕೆ.ಡಿ. ನಾಣಯ್ಯ, ಐ.ಟಿ.ಡಿ.ಪಿ. ಇಲಾಖೆ ತಾಲೂಕು ಅಧಿಕಾರಿಗಳಾದ ಚಂದ್ರಶೇಖರ್, ನವೀನ್, ಗ್ರಾ.ಪಂ. ಪಿ.ಡಿ.ಓ. ವಿಶ್ವನಾಥ್ ಇತರರು ಹಾಜರಿದ್ದರು.