ಮಡಿಕೇರಿ, ಫೆ.2 : ನಗರದ ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಈ ವರ್ಷ ಕುಂಬಾಭಿಷೇಕ ನಡೆಸಬೇಕಿದ್ದು, ಇದಕ್ಕೆ ಪೂರಕವಾಗಿ ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಹೇಗೆ ನಡೆಯಬೇಕು ಮತ್ತು 12ನೇ ವರ್ಷದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಆಚರಣೆಯ ಬಗ್ಗೆ ತಂತ್ರಿಗಳಿಂದ ಸಲಹೆಗಳನ್ನು ಪಡೆಯಲು ತಾ. 3 ರಂದು (ಇಂದು) ದೇವಾಲಯದಲ್ಲಿ ತಾಂಬೂಲ ಪ್ರಶ್ನೆ ಏರ್ಪಡಿಸಲಾಗಿದೆ.
ದೇವಾಲಯದಲ್ಲಿ ವಿಗ್ರಹವನ್ನು ಪ್ರತಿಷ್ಠಾಪಿಸಿದ ಶ್ರೀಈಶ್ವರ ನಂಬೂದರಿ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ ಎಂದು ದೇವಾಲಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಬಿ.ಶಶಿಕುಮಾರ್ ತಿಳಿಸಿದ್ದಾರೆ.