ಮಡಿಕೇರಿ, ಫೆ. 3: ನಗರದ ಶಿಶು ಅಭಿವೃದ್ಧಿ ಯೋಜನೆಯಲ್ಲಿ ತಾ. 4.7.2012 ರಿಂದ ಮಹಿಳಾ ಮೇಲ್ವಿಚಾರಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಹೆಚ್.ವೈ. ಗಂಗಮ್ಮ ಅವರು ದಿನಾಂಕ 1.4.2016 ರಿಂದ ಕೆಲಸಕ್ಕೆ ಹಾಜರಾಗದೇ ಅನಧಿಕೃತ ಗೈರು ಹಾಜರಾಗಿರುತ್ತಾರೆ. ಕರ್ತವ್ಯಕ್ಕೆ ಹಾಜರಾಗುವಂತೆ ಹಲವಾರು ಬಾರಿ ಲಿಖಿತ ಹಾಗೂ ಮೌಖಿಕವಾಗಿ ಸೂಚನೆ ನೀಡಿದ್ದರೂ ಕರ್ತವ್ಯಕ್ಕೆ ಹಾಜರಾಗಿರುವದಿಲ್ಲ. ಪ್ರತಿಕಾ ಪ್ರಕಟಣೆಯಾದ ದಿನಾಂಕದಿಂದ 7 ದಿನಗಳೊಳಗಾಗಿ ಕರ್ತವ್ಯಕ್ಕೆ ಹಾಜರಾಗ ತಕ್ಕದ್ದು. ಇಲ್ಲದಿದ್ದಲ್ಲಿ ನಿಯಮಾನುಸಾರ ಕರ್ತವ್ಯದಿಂದ ವಜಾಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.