ಮಡಿಕೇರಿ, ಫೆ. 2: ವಿದ್ಯಾರ್ಥಿಗಳ ಕಲ್ಯಾಣ ಸಂಘ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ತಾ. 3 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಶಾಸಕ ಕೆ.ಜಿ. ಬೋಪಯ್ಯ, ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಡಾ. ಎ.ಸಿ. ಗಣಪತಿ, ಉಪಾಧ್ಯಕ್ಷ ಸಿ.ಬಿ. ದೇವಯ್ಯ, ಕಾರ್ಯದರ್ಶಿ ಕೆ.ಜಿ. ಉತ್ತಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡವ ಸಾಹಿತ್ಯಕ್ಕೆ ಕೊಡುಗೆಗಳನ್ನು ನೀಡಿರುವ ಡಾ. ಎಂ.ಪಿ. ರೇಖಾ, ಅರ್ಥಶಾಸ್ತ್ರದಲ್ಲಿ ಪ್ರಥಮ ಸ್ಥಾನ ಪಡೆದ ಮಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಜಿ.ಪವಿತ್ರ, ಜಿಲ್ಲಾ ಮಟ್ಟದಲ್ಲಿ ಪಿಯುಸಿಯಲ್ಲಿ ಅಗ್ರ ಸ್ಥಾನ ಪಡೆದ ವಿ.ಅಮೃತವರ್ಷಿಣಿ, ಇತರರನ್ನು ಸನ್ಮಾನಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.