ಮಡಿಕೇರಿ, ಫೆ. 2: ಇಲ್ಲಿನ ಚಿಕ್ಕಪೇಟೆಯಲ್ಲಿರುವ ಶ್ರೀ ದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ತಾ. 5 ಹಾಗೂ 6 ರಂದು ನಡೆಯಲಿದೆ. ತಾ. 5 ರಂದು ಸಂಜೆ 8 ಗಂಟೆಯಿಂದ ಪ್ರಸಾದ ಸಿದ್ದಿ, ರಕ್ಷೋಘ್ನಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ, ಮಹಾಮಂಗಳಾರತಿಯೊಂದಿಗೆ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.

ತಾ. 6 ರಂದು ಬೆಳಿಗ್ಗೆ 8 ಗಂಟೆಯಿಂದ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ ನಂತರ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನೆರವೇರಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ.