ಮಡಿಕೇರಿ, ಫೆ. 6: ತಾಲೂಕಿನ ಅನುದಾನಿತ, ಅನುದಾನ ರಹಿತ, ಹಿರಿಯ ಪ್ರಾಥಮಿಕ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವು ತಾ. 7 ರಂದು (ಇಂದು) ಬೆಳಗ್ಗೆ 9.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವಿವಿದೊದ್ದೇಶ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ತಿಳಿಸಿದ್ದಾರೆ.