ಶ್ರೀಮಂಗಲ, ಫೆ. 6: ಕೊಡಗು ಜಿಲ್ಲೆಯ ಮೂಲಕ ಕೇರಳ ರಾಜ್ಯಕ್ಕೆ ಉದ್ದೇಶಿತ ಹಲವು ರೈಲ್ವೆ ಮಾರ್ಗದ ಯೋಜನೆಯನ್ನು ವಿರೋಧಿಸಿ ತಾ.18ರಂದು ಮೈಸೂರಿನ ಆಗ್ನೇಯ ರೈಲ್ವೆ ಕಚೇರಿ ಎದುರು ಹಮ್ಮಿಕೊಂಡಿರುವ ಪ್ರತಿಭಟನೆಗೆ ಕೊಡವ ಸಮಾಜದ ಒಕ್ಕೂಟ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದು, ಮುಂದಿನ ಹಂತದ ಹೋರಾಟ ರೂಪಿಸಲು ಜಿಲ್ಲೆಯ ಎಲ್ಲಾ ಜನಾಂಗಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳನ್ನು ಒಂದೇ ವೇದಿಕೆಯಲ್ಲಿ ಒಕ್ಕೂಟದ ಮುಂದಾಳತ್ವದಲ್ಲಿ ಯೋಜನೆಯ ವಿರುದ್ಧ ಹೋರಾಟ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.ಈ ಬಗ್ಗೆ ಕೊಡವ ಸಮಾಜಗಳ ಒಕ್ಕೂಟದ ಸಭೆಯಲ್ಲಿ ನಡೆದ ಎಲ್ಲಾ ಕೊಡವ ಸಮಾಜ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

ಪ್ರಾಸ್ತ್ತಾವಿಕವಾಗಿ ಮಾತನಾಡಿದ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು ಕೊಡಗು ಜಿಲ್ಲೆ ಈಗಾಗಲೇ ಹಲವಾರು ಮಾರಕ ಯೋಜನೆಗಳಿಂದ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದು, ಇದೀಗ ಕೇರಳ ರಾಜ್ಯಕ್ಕೆ ಉದ್ದೇಶಿತ ರೈಲು ಮಾರ್ಗದಿಂದ ಜಿಲ್ಲೆಯ ಭËಗೋಳಿಕ, ಸಾಮಾಜಿಕ ಹಾಗೂ ನೈಸರ್ಗಿಕ ಪರಿಸರದ ಮೆಲೆ ಸಾಕಷ್ಟು ದುಷ್ಪರಿಣಾಮ ಬೀರಲಿದೆ. ಈ ನಿಟ್ಟಿನಲ್ಲಿ ಕೊಡಗು ರೈಲ್ವೆ ಹೋರಾಟ ವೇದಿಕೆ ವತಿಯಿಂದ ಮೈಸೂರಿನಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಪ್ರತಿಭಟನೆಗೆ ಪ್ರತಿಯೊಂದು ಕೊಡವ ಸಮಾಜ ಹಾಗೂ

(ಮೊದಲ ಪುಟದಿಂದ) ಜಿಲ್ಲೆಯಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರೂ ಪಾಲ್ಗೊಂಡು ರೈಲ್ವೆ ಯೋಜನೆಗೆ ತಡೆ ಮಾಡುವಂತಾಗಬೇಕೆಂದು ಕರೆ ನೀಡಿದರು.

ಮಾಜಿ ಸಚಿವ ಹಾಗೂ ಒಕ್ಕೂಟದ ಪೋಷಕ ಸದಸ್ಯ ಯಂ.ಸಿ.ನಾಣಯ್ಯ ಅವರು ಮಾತನಾಡಿ ರೈಲ್ವೆ ಯೋಜನೆಯಿಂದ ಕೊಡಗು ಜಿಲ್ಲೆಗೆ ಯಾವದೇ ಪ್ರಯೋಜನವಿಲ್ಲ. ಈ ಯೋಜನೆಯಿಂದ ಕೊಡಗಿನ ಮೇಲೆ ಉಂಟಾಗುವ ದುಷ್ಪರಿಣಾಮ ಉಹಿಸಲು ಅಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ರೈಲ್ವೆ ಯೋಜನೆಯನ್ನು ವಿರೋಧಿಸಬೇಕು. ಈಗಾಗಲೇ ಉದ್ದೇಶಿತ ಕುಶಾಲನಗರದವರೆಗಿನ ರೈಲು ಮಾರ್ಗವನ್ನು ಸಹ ತಡೆಯಬೇಕು. ಜಿಲ್ಲೆಯಲ್ಲಿ ಕೇವಲ ದ್ವಿಪಥದ ರಸ್ತೆ ಸಾಕು. ನಮಗೆ ಬಹುಮಾರ್ಗ ಹೆದ್ದಾರಿಗಳ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಮಂಡೇಡ ರವಿ ಉತ್ತಪ್ಪ ಮಾತನಾಡಿ ಈಗಾಗಲೇ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಕೊಡಗಿನ ಜನರು ಹಾಗೂ ವಿವಿಧ ಸಂಘ ಸಂಸ್ಥೆಗಳು ಕೊಡಗಿಗೆ ಮಾರಕವಾಗುವ ರೈಲ್ವೆ ಯೋಜನೆಯ ವಿರುದ್ಧ ನಡೆಯುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲು ಈಗಾಗಲೇ ನಿರ್ಧರಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಗೆ ಮಾರಕವಾಗುವ ಯಾವದೇ ಯೋಜನೆಗಳಿಗೆ ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ಕೊಡಗಿನ ಎಲ್ಲಾ ಮೂಲ ನಿವಾಸಿಗಳು ಹಾಗೂ ಇತರ ಎಲ್ಲಾ ಸಂಘ ಸಂಸ್ಥೆಗಳನ್ನು ಒಂದೇ ವೇದಿಕೆಗೆ ತಂದು ಹೋರಾಟ ನಡೆಸಲು ಮನವಿ ಮಾಡಿದರು.

ಬಾಳೆಲೆ ಕೊಡವ ಸಮಾಜದ ಅಧ್ಯಕ್ಷ ಮಲ್ಚೀರ ಬೋಸ್ ಚಿಟ್ಟಿಯಪ್ಪ ಮಾತನಾಡಿ, ಈಗಾಗಲೇ ಈ ಮಾರಕ ಯೋಜನೆಯ ವಿರುದ್ಧ ಬಾಳೆಲೆಯಲ್ಲಿ ಸಭೆ ನಡೆಸಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಲಾಗಿದೆ. ಈಗಾಗಲೇ ಇದಕ್ಕೆ ರಾಜ್ಯ ಸರ್ಕಾರ ಸರ್ವೇ ಕಾರ್ಯಕ್ಕೆ ಸಮ್ಮತ್ತಿಯನ್ನು ಸೂಚಿಸಿದ್ದು, ಈ ಬಗ್ಗೆ ಯಂ.ಸಿ.ನಾಣಯ್ಯ ಅವರ ಮುಂದಾಳತ್ವದಲ್ಲಿ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಈ ಮಾರಕ ಯೋಜನೆಯನ್ನು ತಡೆಗಟ್ಟಲು ಒತ್ತಡ ಹಾಕುವಂತೆ ಮನವಿಯನ್ನು ಮಾಡಿದರು.

ಯುನೈಟೆಡ್ ಕೊಡವ ಆರ್ಗನೈಷೇಷನ್ ಸಂಘÀಟನೆ (ಯುಕೊ)ಯ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಮಾತನಾಡಿ, ರೈಲ್ವೆ ಯೋಜನೆಯ ಸಂಪೂರ್ಣ ಮಾಹಿತಿ ಹಾಗೂ ಈ ಯೋಜನೆ ಅನುಷ್ಠಾನಗೊಂಡರೆ ಆಗಲಿರುವ ದುಷ್ಪರಿಣಾಮಗಳನ್ನು ವಿವರಿಸಿದರು. ಇದಕ್ಕೆ ಮುನ್ನುಡಿಯಾಗಿ ರೈಲ್ವೆ ಮಾರ್ಗ ವಿರೋಧಿ ಪ್ರತಿಭಟನೆ ಆರಂಭ ಮಾತ್ರ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಕೊಡವ ಸಮಾಜ, ಸಂಘ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನಿಂದ ಹೋರಾಟವನ್ನು ಮಾಡುವದರ ಮೂಲಕ ಕೊಡಗನ್ನು ಕೊಡಗಾಗಿ ಉಳಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದರು.

ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಚೊಟ್ಟೆಕ್‍ಮಾಡ ರಾಜೀವ್ ಬೋಪಯ್ಯ ಮಾತನಾಡಿ ಉದ್ದೇಶಿತ ರೈಲು ಮಾರ್ಗವನ್ನು ತಡೆಯುವ ನಿಟ್ಟಿನಲ್ಲಿ ಪೊನ್ನಂಪೇಟೆ ಕೊಡವ ಸಮಾಜ ಎಲ್ಲಾ ಸಂಘ ಸಂಸ್ಥೆಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ವೇದಿಕೆ ಕಲ್ಪಿಸಿದೆ ಎಂದರು.

ಈ ಹೋರಾಟಕ್ಕೆ ಬೆಂಬಲವನ್ನು ವ್ಯಕ್ತಪಡಿಸಿ ಮಕ್ಕಂದೂರು ಕೊಡವ ಸಮಾಜದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಗೋಣಿಕೊಪ್ಪ ಕೊಡವ ಸಮಾಜದ ಅಧ್ಯಕ್ಷ ಚೆಕ್ಕೇರ ಸೋಮಯ್ಯ, ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ವಾಂಚೀರ ನಾಣಯ್ಯ, ಫೆÉಡರೇಷನ್ ಆಫ್ ಕೊಡವ ಸಮಾಜದ ಖಜಾಂಚಿ ಚಿರಿಯಪಂಡ ಕಾಶಿಯಪ್ಪ ಮಾತನಾಡಿದರು. ವೇದಿಕೆಯಲ್ಲಿ ಒಕ್ಕೂಟದ ಗೌರವ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ, ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷ ಮಣವಟ್ಟಿರ ಚಿಣ್ಣಪ್ಪ ಮತ್ತಿತರರು ಹಾಜರಿದ್ದರು.