ಮಡಿಕೇರಿ, ಫೆ. 6: ರಾಜ್ಯ ಸರಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆ, ಶೈಕ್ಷಣಿಕ ವಿಚಾರಗೋಷ್ಠಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕರ ಸನ್ಮಾನ ಸಮಾರಂಭವು ತಾ. 8 ರಂದು ಬೆಳಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಕೆ.ಪ್ರಭು ವಹಿಸಲಿದ್ದು. ಕೊಡಗು ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಉದ್ಘಾಟನೆ ಮಾಡಲಿದ್ದಾರೆ.

ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷ ಕೆ.ಕೃಷ್ಣಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಚ್.ಜಿ.ಭಾಗ್ಯ, ಕೂಡಿಗೆ ಅಭಿವೃದ್ಧಿ ಡಯಟ್ ಉಪ ನಿರ್ದೇಶಕ ವಾಲ್ಟರ್ ಹಿಲೇರಿ ಡಿ’ಮೊಲ್ಲೊ, ಜಿಲ್ಲಾ ಯೋಜನೆ ಸಮನ್ವಯಾಧಿಕಾರಿ ಸಿ.ಬಿ.ಭಾಗ್ಯಲಕ್ಷ್ಮಿ, ಜಿಲ್ಲಾ ಶಿಕ್ಷಣ ಅಧಿಕಾರಿ ಎಚ್.ಕೆ.ಪಾಂಡು, ಸರ್ಕಾರಿ ನೌಕರರ ಪ್ರಾಥಮಿಕ ಶಿಕ್ಷಕರ ಸಂಘ ಅಧ್ಯಕ್ಷ ಕೆ.ಕೆ.ಮಂಜುನಾಥ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯಿತ್ರಿ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಲೋಕೇಶ್ ಇತರರು ಭಾಗವಹಿಸಲಿದ್ದಾರೆ.