ನಾಪೋಕ್ಲು, ಫೆ. 6: ಚೆಯ್ಯಂಡಾಣೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾ. 7 ರಂದು ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಟ್ಟಿರುವ ಮೂರು ಗ್ರಾಮ ಪಂಚಾಯಿತಿಗಳು ಮತ್ತು ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನವನ್ನು ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.