ಮಡಿಕೇರಿ, ಫೆ.6 : ನಾಲ್ಕು ಕರಗ ದೇವತೆಗಳಲ್ಲಿ ಒಂದಾದ ನಗರದ ಶ್ರೀದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.

ನಿನ್ನೆ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ, ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.ಇಂದು ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ, ದೇವಿಗೆ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಜರುಗಿತು. ನೆರೆದಿದ್ದ ನೂರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.