ಸೋಮವಾರಪೇಟೆ, ಫೆ. 7: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌಡಳ್ಳಿ ವ್ಯಾಪ್ತಿಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ ಸಮಾರಂಭ ಗೌಡಳ್ಳಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಮಾಜಿ ಸದಸ್ಯ ಹೆಚ್.ಆರ್. ಸುರೇಶ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಹಿಳೆಯರನ್ನೂ ಸಮಾಜದ ಮುಖ್ಯವಾಹಿನಿಗೆ ತರುತ್ತಿದ್ದು, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲರನ್ನಾಗಿ ಮಾಡುತ್ತಿದೆ ಎಂದರು.
ತಾ.ಪಂ. ಸದಸ್ಯೆ ಕುಸುಮಾ ಅಶ್ವಥ್, ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ವೈ. ಪ್ರಕಾಶ್, ಮೇಲ್ವಿಚಾರಕ ರಮೇಶ್, ಗೌಡಳ್ಳಿ ಗ್ರಾ.ಪಂ. ಉಪಾಧ್ಯಕ್ಷೆ ಸವಿತಾ, ನಂದಿಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಗಣಪತಿ, ಒಕ್ಕೂಟದ ಅಧ್ಯಕ್ಷ ಪ್ರವೀಣ್, ಪ್ರಮುಖ ಹೊನ್ನರಾಜಪ್ಪ ಅವರುಗಳು ಉಪಸ್ಥಿತರಿದ್ದರು.