ಮಡಿಕೇರಿ, ಫೆ. 7: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ತಾ. 8 ರಂದು (ಇಂದು) ಪೂರ್ವಾಹ್ನ 10.30 ಗಂಟೆಗೆ ಕಾಲೇಜಿನಿಂದ ಮೆರವಣಿಗೆ ಮೂಲಕ ಖಾಸಗಿ ಬಸ್ ನಿಲ್ದಾಣ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಮನವಿ ಸಲ್ಲಿಸಲಿದ್ದೇವೆ ಎಂದು ವಿದ್ಯಾರ್ಥಿ ಸಂಘದ ಪ್ರಕಟಣೆ ತಿಳಿಸಿದೆ.