ಸೋಮವಾರಪೇಟೆ, ಫೆ. 7: ಸಮೀಪದ ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದಿಂದ ತಾ. 16ರಂದು ಅಪರಾಹ್ನ 3 ಗಂಟೆಗೆ ನೇರುಗಳಲೆ ಶಾಲಾ ಮೈದಾನದಲ್ಲಿ ಒಕ್ಕಲಿಗರ ಸಂಘದ ಅಧಿಕೃತ ಉದ್ಘಾಟನೆ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬೋಜೇಗೌಡ ತಿಳಿಸಿದ್ದಾರೆ.

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನದೊಂದಿಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಹಾಸಂಸ್ಥಾನ ಮಠದ ಹಾಸನ ಮತ್ತು ಕೊಡಗು ಜಿಲ್ಲೆಯ ಕಾರ್ಯದರ್ಶಿಗಳಾದ ಶ್ರೀ ಶಂಭುನಾಥ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದ ಅಧ್ಯಕ್ಷ ಹೆಚ್.ಕೆ. ವಿನೋದ್‍ಕುಮಾರ್ ವಹಿಸಲಿದ್ದಾರೆ.

ಮಾಜಿ ಸಚಿವ ಬಿ.ಎ. ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹೆಚ್.ಕೆ. ಶೇಖರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ತಾ.ಪಂ. ಮಾಜಿ ಅಧ್ಯಕ್ಷ ಅರೆಯೂರು ಜಯಣ್ಣ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಸೇರಿದಂತೆ ಇತರ ಮುಖಂಡರು ಭಾಗವಹಿಸಲಿದ್ದಾರೆ ಎಂದು ಬೋಜೇಗೌಡ ತಿಳಿಸಿದ್ದಾರೆ.