ಕೂಡಿಗೆ, ಫೆ. 7: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡೆದ ರಾಷ್ಟ್ರೀಯ ಜಂತು ಹುಳು ನಿರ್ಮೂಲನೆ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವಿಚಂದ್ರ ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿರ್ಮೂಲನೆ ಮಾಡುವದರ ಬಗ್ಗೆ ಆಯಾ ಕ್ಷೇತ್ರದ ವ್ಯಾಪ್ತಿಗಳಲ್ಲಿ ಸಾರ್ವಜನಿಕರಿಗೆ ಮನವರಿಕೆ ಮಾಡಿ, ಅದಕ್ಕೆ ಸಂಬಂಧಪಟ್ಟ ವಿಷಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು ಹಾಗೂ ಶಾಲೆಗಳಲ್ಲಿ ಜಂತುಹುಳು ನಿರ್ಮೂಲನೆಯ ಔಷದೋಪಚಾರ ನೀಡುವ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಮೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಶೂಶ್ರಷಕಿಯರು ಪಾಲ್ಗೊಂಡಿದ್ದರು.