ಮಡಿಕೇರಿ, ಫೆ. 7: ರಾಜ್ಯದಲ್ಲಿ ಪ್ರಕಟಿತ ಪುಸ್ತಕಗಳ ಹಾಗೂ ಪುಸ್ತಕ ಪ್ರಕಾಶಕರ ವಿವರಗಳು ಒಂದೆಡೆ ಲಭ್ಯವಾದಲ್ಲಿ ಸಾಹಿತ್ಯಾಸಕ್ತರಿಗೆ ಅನುಕೂಲವಾಗುವ ದೃಷ್ಟಿಕೋನದಿಂದ ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಾಶಕರ ನೋಂದಣಿ ಯೋಜನೆಯೊಂದನ್ನು ಆರಂಭಿಸುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದೆಲ್ಲೆಡೆಯಲ್ಲಿರುವ ಪ್ರಕಾಶಕರು ಕನ್ನಡ ಪುಸ್ತಕ ಪ್ರಾಧಿಕಾರದಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಸೌಭಾಗ್ಯ ತಿಳಿಸಿದ್ದಾರೆ.

ಅರ್ಜಿ ನಮೂನೆಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ತಾ. 20 ಕಡೆಯ ದಿನವಾಗಿದ್ದು, ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು 560002 ಇಲ್ಲಿಗೆ ಕಳುಹಿಸಿಕೊಡಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ 22107704, 22484516 ಅನ್ನು ಸಂಪರ್ಕಿಸಬಹುದು.