ಕುಶಾಲನಗರ, ಫೆ. 8: ಕುಶಾಲನಗರ ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುವಲ್ಲಿ ಸರಕಾರಿ ಆಸ್ಪತ್ರೆಯ ವೈದ್ಯರು ವಿಳಂಬ ಮಾಡಿದ ಸಂದರ್ಭ ಕಾಲೇಜಿನ ವಿದ್ಯಾರ್ಥಿಗಳು ಮತ್ತು ನಾಗರಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಸ್ಥಳೀಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳಾದ ಯಶವಂತ್ ಮತ್ತು ಗೌರೀಶ್ ಕೊಪ್ಪ ಕಡೆಯಿಂದ ಕುಶಾಲನಗರದತ್ತ ಕಾಲೇಜಿಗೆ ತಮ್ಮ ಬೈಕ್‍ನಲ್ಲಿ ಬರುತ್ತಿದ್ದ ಸಂದರ್ಭ ಕಾರೊಂದು ಡಿಕ್ಕಿಯಾಗಿ ತೀವ್ರ ಗಾಯಗೊಂಡು ಸರಕಾರಿ ಆಸ್ಪತ್ರೆಗೆ ಧಾವಿಸಿದಾಗ ಆಸ್ಪತ್ರೆಯಲ್ಲಿದ್ದ ವೈದ್ಯರೊಬ್ಬರು ಚಿಕಿತ್ಸೆ ನೀಡಲು ನಿರಾಕರಣೆ ಮಾಡಿರುವದಾಗಿ ವಿದ್ಯಾರ್ಥಿಗಳು ಆಕ್ರೋಷ ವ್ಯಕ್ತಪಡಿಸಿದರು.
1 ಗಂಟೆ ಕಾಲ ಯಾವದೇ ವೈದ್ಯರು ಆಸ್ಪತ್ರೆಯಲ್ಲಿ ದೊರಕದೆ ರೋಗಿಗಳು ಪರದಾಡುವಂತಾಯಿತು ಎಂದು ಕಾಲೇಜಿನ ಉಪನ್ಯಾಸಕ ಸಂದೇಶ್ ದೂರಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಗಾಯಾಳುಗಳನ್ನು ಮೈಸೂರಿಗೆ ಸಾಗಿಸಲಾಗಿದೆ.