ನಾಪೆÇೀಕ್ಲು, ಫೆ. 8: ನಾಪೆÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸುವಂತೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದರೂ, ಅದು ಕಟ್ಟುನಿಟ್ಟಾಗಿ ಜಾರಿಯಾಗಿಲ್ಲ. ಕೂಡಲೇ ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಕ್ರಮಕೈಗೊಳ್ಳದಿದ್ದರೆ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಗ್ರ ಹೋರಾಟ ನಡೆಸಲಾಗುವದು ಎಂದು ಜಿಲ್ಲಾ ಮಾನವ ಹಕ್ಕು ಆಯೋಗ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಹಾಗೂ ಮಡಿಕೇರಿ ತಾಲೂಕು ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ ಒತ್ತಾಯಿಸಿದ್ದಾರೆ.
ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಅವರು ಪ್ಲಾಸ್ಟಿಕ್ ಬಳಕೆ ಎಂದಿನಂತೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿ ಆದೇಶಕ್ಕೆ ಯಾವದೇ ವ್ಯಾಪಾರಸ್ಥರು, ಗ್ರಾಹಕರು ಬೆಲೆ ನೀಡುತ್ತಿಲ್ಲ ಎಂದು ದೂರಿದರು. ನಾಪೆÇೀಕ್ಲು ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ಜಾಗ ಕಾವೇರಿ ನದಿ ತೀರದಲ್ಲಿದೆ. ಅಲ್ಲಿ ಹಾಕಲಾಗಿರುವ ಪ್ಲಾಸ್ಟಿಕ್, ತ್ಯಾಜ್ಯಗಳು ಗಾಳಿ, ಮಳೆಯ ಕಾರಣದಿಂದ ಕಾವೇರಿ ನದಿ ಒಡಲು ಸೇರುತ್ತಿದೆ. ಈ ಬಗ್ಗೆ ಸಂಬಂಧಿಸಿದವರು ಅಗತ್ಯ ಕ್ರಮಕೈಗೊಳ್ಳಬೇಕು. ನಾಪೆÇೀಕ್ಲು ಪಟ್ಟಣದಲ್ಲಿರುವ ಕೋಳಿ, ಕುರಿ ಸೇರಿದಂತೆ ಎಲ್ಲಾ ಮಾಂಸದ ಅಂಗಡಿಗಳಲ್ಲಿ ಮಾಂಸವನ್ನು ಹಾಗೆಯೇ ತೂಗುಹಾಕಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆಯೂ ಗ್ರಾಮ ಪಂಚಾಯಿತಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು ತಪ್ಪಿದಲ್ಲಿ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದರು.