ಮಡಿಕೇರಿ, ಫೆ. 9: ಮಡಿಕೇರಿ 66/11ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಎಫ್ 1 ರಾಜಾಸೀಟ್ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಾಗುವದರಿಂದ ತಾ 10 ರಂದು (ಇಂದು) ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ, ಜಿಲ್ಲಾಧಿಕಾರಿ ಕಚೇರಿ ರಾಜಾಸೀಟ್, ಹೊಸಬಡಾವಣೆ, ಇಂದಿರಾನಗರ, ಚಾಮುಡೇಶ್ವರಿನಗರ ಡಿ.ಆರ್.ವಸತಿ ಗೃಹ, ಡೈರಿ ಫಾರಂ, ಎಫ್.ಎಂ.ಸಿ ಸುತ್ತಮುತ್ತ, ವಿದ್ಯಾನಗರ. ಗಾಳಿಬೀಡು, ಕಾಲೂರು, ಒಣಚಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಮಡಿಕೇರಿ : ಕುಶಾಲನಗರ 220ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೋಗುವ ಈ2 ಭುವನಗಿರಿ, ಈ3 ಹೆಬ್ಬಾಲೆ, ಈ6 ಇಂಡಸ್ಟ್ರಿಯಲ್ ಏರಿಯಾ, ಮತ್ತು ಈ8 ಶಿರಂಗಾಲ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ಸದರಿ ಫೀಡರ್‍ಗಳ ವಿದ್ಯುತ್ ಸರಬರಾಜಿನಲ್ಲಿ ತಾ. 11 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸ್ಥಗಿತಗೊಳಿಸಲಾಗುವದು. ಆದ್ದರಿಂದ, ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ಶಿರಂಗಾಲ ಮತ್ತು ಸುತ್ತಮುತ್ತಲಿನ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.