ಮಡಿಕೇರಿ, ಫೆ.9 : ಕೊಡಗು ಜಿಲ್ಲಾ ಅಹಿಂದ ಒಕ್ಕೂಟದ ಸಭೆ ತಾ. 11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾರ್ಯಪ್ಪÀ ವೃತ್ತದ ಬಳಿ ಇರುವ ಡಾ.ಅಂಬೇಡ್ಕರ್ ಭವನದಲ್ಲಿ ಅಹಿಂದ ಜಿಲ್ಲಾಧ್ಯಕ್ಷ ಟಿ.ಎಂ.ಮುದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಯಾಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ತಿಳಿಸಿದ್ದಾರೆ. ಅಹಿಂದ ಸಮಾಜಗಳ ಎಲ್ಲಾ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಜಿಲ್ಲಾ ಘಟಕ ಹಾಗೂ ತಾಲೂಕು ಘಟಕಗಳಿಗೆ ಪದಾಧಿಕಾರಿಗಳ ನೇಮಕ ಮಾಡಲಾಗುವದು.